"ವಿದೇಶದಿಂದ ಬರುತ್ತಿದ್ದರೆ ಜಿಲ್ಲಾಡಳಿತಕ್ಕೆ ಅವರ ಮಾಹಿತಿ ನೀಡಿ'

ಬೆಳಗಾವಿ, ಮಾರ್ಚ್ 18: ಬೆಳಗಾವಿ ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ದೇಶದಿಂದ ಹೊರದೇಶಗಳಲ್ಲಿ ಇರುವವರ ಬಗ್ಗೆ ಸಂಬಂಧಿಸಿದ ‌ಕುಟುಂಬದವರು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಮಾತ್ರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

Belagavi DC Requested To People

ಸ್ವದೇಶಕ್ಕೆ ಆಗಮಿಸುವವರ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಬೆಳಗಾವಿ ಇವರ ಕಚೇರಿಗೆ ಮಾಹಿತಿಯನ್ನು ಒದಗಿಸಬಹುದು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಕಂಟ್ರೋಲ್‌ ರೂಮ್ ದೂರವಾಣಿ ಸಂಖ್ಯೆ 0831-2424284 ಇದಕ್ಕೆ ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+