ರಮೇಶ್ ಜಾರಕಿಹೊಳಿ ಮೊದಲ ಬೇಡಿಕೆಗೆ ಮಣಿದ ಮೈತ್ರಿ ಸರ್ಕಾರ

ಬೆಳಗಾವಿ, ಸೆಪ್ಟೆಂಬರ್ 17 : ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರ ಮೊದಲ ಬೇಡಿಕೆಗೆ ಮೈತ್ರಿ ಸರ್ಕಾರ ಮಣಿದಿದೆ. ಬೆಳಗಾವಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸೋಮವಾರ ಸಂಜೆ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಎರಡು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ವರ್ಗಾವಣೆ ಆಗಿರಲಿಲ್ಲ.

Belagavi deputy commissioner transferred

2017ರಲ್ಲಿ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಎಸ್.ಜಿಯಾವುಲ್ಲಾ ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಮೇಶ್ ಜಾರಕಿಹೊಳಿ ಜಿಲ್ಲಾಧಿಕಾರಿಗಳನ್ನು ಬದಲಾವಣೆ ಮಾಡಲು ಬೇಡಿಕೆ ಇಟ್ಟಿದ್ದರು.

ಈಗ ರಮೇಶ್ ಜಾರಕಿಹೊಳಿ ಅವರು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಸಮಯದಲ್ಲಿಯೇ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+