ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗದ ಡಿಪಿಆರ್‌ ಸಿದ್ಧ

|
Google Oneindia Kannada News

ಬೆಳಗಾವಿ, ಜನವರಿ 16 : ಬಹುನಿರೀಕ್ಷಿತ ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆ ಡಿಪಿಆರ್ ಸಿದ್ಧಗೊಂಡಿದೆ. ಕರ್ನಾಟಕ ಸರ್ಕಾರ ಈಗಾಗಲೇ ಯೋಜನೆಗೆ ಒಪ್ಪಿಗೆ ನೀಡಿದ್ದು, ಫೆಬ್ರವರಿ 1ರ ಕೇಂದ್ರ ಬಜೆಟ್‌ನಲ್ಲಿ ಯೋಜನೆ ಘೋಷಣೆಯಾಗುವ ನಿರೀಕ್ಷೆ ಇದೆ.

ಬೆಳಗಾವಿ- ಧಾರವಾಡ ನೇರ ರೈಲು ಮಾರ್ಗ ದಶಕಗಳ ಬೇಡಿಕೆಯಾಗಿದೆ. ರೈಲ್ವೆ ಮಾರ್ಗ ನಿರ್ಮಾಣಕ್ಕೆ ನೈಋತ್ಯ ರೈಲ್ವೆ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿದೆ ರೈಲ್ವೆ ಇಲಾಖೆಗೆ ಸಲ್ಲಿಕೆ ಮಾಡಿದೆ. ಯೋಜನೆಯ ಒಟ್ಟು ವೆಚ್ಚ 988 ಕೋಟಿ ರೂ.ಗಳು.

ಬೆಳಗಾವಿ-ಧಾರವಾಡ-ಹುಬ್ಬಳ್ಳಿ ನಡುವೆ ಹೈಸ್ಪೀಡ್ ರೈಲುಬೆಳಗಾವಿ-ಧಾರವಾಡ-ಹುಬ್ಬಳ್ಳಿ ನಡುವೆ ಹೈಸ್ಪೀಡ್ ರೈಲು

ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆಬೆಳಗಾವಿ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಸೇರ್ಪಡೆ

ಬೆಳಗಾವಿ ಸಂಸದ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಶೇಷ ಮುತುವರ್ಜಿ ವಹಿಸಿದ್ದರಿಂದ ರೈಲು ಮಾರ್ಗದ ಸಮೀಕ್ಷೆ ಮತ್ತು ಡಿಪಿಆರ್‌ ಬೇಗನೆ ಪೂರ್ಣಗೊಂಡಿದೆ. ಜನರು ಈಗ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ಸಿಗಲಿದೆ ಎಂದು ಕಾದು ಕುಳಿತಿದ್ದಾರೆ.

988 ಕೋಟಿ ರೂ. ವೆಚ್ಚ

988 ಕೋಟಿ ರೂ. ವೆಚ್ಚ

ನೈಋತ್ಯ ರೈಲ್ವೆ ವಲಯ ಕೇಂದ್ರ ರೈಲ್ವೆ ಮಂಡಳಿಗೆ ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗದ ಡಿಪಿಆರ್ ಸಲ್ಲಿಕೆ ಮಾಡಿದೆ. ಒಟ್ಟು 90 ಕಿ. ಮೀ. ದೂರದ ಮಾರ್ಗಕ್ಕೆ 988 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಬಾಕಿ ಇದೆ.

ಯಾವ-ಯಾವ ನಿಲ್ದಾಣಗಳು

ಯಾವ-ಯಾವ ನಿಲ್ದಾಣಗಳು

ಧಾರವಾಡ-ಬೆಳಗಾವಿ ರೈಲು ಮಾರ್ಗ ನಿರ್ಮಾಣವಾದರೆ ಧಾರವಾಡ, ಕ್ಯಾರಕೊಪ್ಪ, ಕಿತ್ತೂರ, ಬಾಗೇವಾಡಿ, ಎಂ. ಕೆ. ಹುಬ್ಬಳ್ಳಿ, ಕೆ. ಕೆ. ಕೊಪ್ಪ, ಯಳ್ಳೂರ ಸೇರಿ 11 ರೈಲು ನಿಲ್ದಾಣಗಳನ್ನು ನಿರ್ಮಾಣ ಮಾಡಬೇಕಿದೆ ಎಂದು ಡಿಪಿಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಹಿಂದೆಯೂ ಸಮೀಕ್ಷೆ ನಡೆಸಲಾಗಿತ್ತು

ಹಿಂದೆಯೂ ಸಮೀಕ್ಷೆ ನಡೆಸಲಾಗಿತ್ತು

2013-14 ನೇ ಸಾಲಿನಲ್ಲಿಯೂ ಬೆಳಗಾವಿ-ಧಾರವಾಡ ರೈಲು ಮಾರ್ಗದ ಸಮೀಕ್ಷೆ ನಡೆಸಲಾಗಿತ್ತು. ಆದರೆ, ಡಿಪಿಆರ್ ಸಿದ್ಧವಾಗಿರಲಿಲ್ಲ. ಈಗ ಬೆಳಗಾವಿ ಸಂಸದ ಸುರೇಶ್ ಅಂಗಡಿ ಮುತುವರ್ಜಿ ವಹಿಸಿ ಯೋಜನೆಯನ್ನು ಕಾರ್ಯಗತಗೊಳಿಸಲು ಮುಂದಾಗಿದ್ದಾರೆ.

ನೇರ ರೈಲು ಮಾರ್ಗವಿಲ್ಲ

ನೇರ ರೈಲು ಮಾರ್ಗವಿಲ್ಲ

ಧಾರವಾಡ-ಬೆಳಗಾವಿ ನಡುವೆ ಈಗ ನೇರ ರೈಲು ಮಾರ್ಗವಿಲ್ಲ. ಆದ್ದರಿಂದ, ರೈಲುಗಳು ಖಾನಾಪುರ-ಲೋಂಡಾ-ಆಳ್ನಾವರ ಮಾರ್ಗವಾಗಿ ಸಂಚಾರ ನಡೆಸುತ್ತಿವೆ. ದಶಕಗಳಿಂದ ನೇರ ರೈಲು ಮಾರ್ಗ ನಿರ್ಮಾಣವಾಗಬೇಕು ಎಂದು ಬೇಡಿಕೆ ಇಡಲಾಗುತ್ತಿತ್ತು.

English summary
Direct railway line between Belagavi-Dharwad detailed project report (DPR) submitted to railway department. Project may announce in 2020-21 union budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X