Get Updates
Get notified of breaking news, exclusive insights, and must-see stories!

Belgavi factory fire Case: ಸುಟ್ಟು ಕರಕಲಾದ ಮಗನ ಮೂಳೆಗಳನ್ನು ತಂದೆಗೆ ಕೈಚೀಲದಲ್ಲಿ ತುಂಬಿಕೊಟ್ಟ ಅಧಿಕಾರಿಗಳು-ಆಕ್ರೋಶ

ಬೆಳಗಾವಿ, ಆಗಸ್ಟ್‌, 08: ಬೆಳಗಾವಿಯ ಸ್ನೇಹಂ ಎಂಬ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದು, ‌ದೊಡ್ಡ ಅನಾಹುತವೇ ನಡೆದಿದೆ. ಘಟನೆಯಲ್ಲಿ ಓರ್ವ ಯುವಲ ಸಜೀವ ದಹನವಾಗಿದ್ದು, 16 ಗಂಟೆಗಳ ಕಾರ್ಯಾಚರಣೆ ಬಳಿಕ ಮೃತನ ಮೂಳೆಗಳು ಲಭ್ಯವಾಗಿದೆ.

ಆದರೆ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (19) ಅವರ ಮೃತದೇಹದ ಅವಶೇಷಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ಅವರ ತಂದೆ ಸಣ್ಣಗೌಡ ಅವರ ಕೈಗೆ ಕೊಟ್ಟಿದ್ದು, ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

Belagavi factory fire disaster Father took bones of his burnt death son in bag

ಮನೆಯ ನಿರ್ವಹಣೆ ಜವಾಬ್ದಾರಿ ಹೊತ್ತು ಕಾರ್ಖಾನೆಗೆ ಕೆಲಸಕ್ಕೆ ಸೇರಿಕೊಂಡಿದ್ದ ಯಲ್ಲಪ್ಪ ಕಾರ್ಖಾನೆಗೆ ಬಿದ್ದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾನೆ. ಇನ್ನು ಆತನ ಸುಟ್ಟು ಕರಕಲಾಗಿ ಮೂಳೆಗಳು ಮಾತ್ರ ಸಿಕ್ಕಿದ್ದು, ಆ ಮೂಳೆಗಳನ್ನು ಕೈಚೀಲದಲ್ಲಿ ತುಂಬಿ ತಂದೆಯ ಕೈಗೆ ಕೊಡಲಾಗಿದೆ. ಈ ದೃಶ್ಯ ಎಂಥಹವರ ಮನಕಲುಕುವಂತಿದೆ.

ಸಾವನ್ನಪ್ಪಿದ ಮಗನ ಮೂಳೆಗಳನ್ನು ಕೈಯಲ್ಲಿ ಹಿಡಿದು ತಂದೆ ಕಣ್ಣೀರು ಹಾಕಿದ್ದು, ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ರೀತಿ ಕೈ ಚೀಲದಲ್ಲಿ ಮೂಳೆಗಳನ್ನು ಹಾಕಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದೆ, ಮೃತದೇಹ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದೆ, ಮೂಳೆಗಳನ್ನು ಚೀಲದಲ್ಲಿ ನೀಡಿ ಅಮಾನವೀಯತೆ ಮೆರೆದಿದ್ದಾರೆ ಎಂದು ಸಾರ್ವಜನಿಕರು ಕೆಂಡಕಾರುತ್ತಿದ್ದಾರೆ.

ಘಾಟನೆ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದ ಹೊರ ವಲಯದಲ್ಲಿ ಇರುವ ಈ ಸ್ನೇಹಂ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಅಲ್ಲದೆ, ಮಾರ್ಕಂಡೇಯ ನಗರ ನಿವಾಸಿ ಆಗಿದ್ದ ಯಲ್ಲಪ್ಪ ಗುಂಡ್ಯಾಗೋಳ(19) ಬೆಂಕಿಯಲ್ಲಿ ಬೆಂದು ಸಜೀವದಹನವಾಗಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಮನೆ ನಿರ್ವಹಣೆಗಾಗಿ ಯಲ್ಲಪ್ಪ ಕೆಲಸಕ್ಕೆ ಸೇರಿದ್ದ. ನಿನ್ನೆ ಸಂಜೆ 7 ಗಂಟೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಾರ್ಖಾನೆಗೆ ಬೆಂಕಿ ಬಿದ್ದಿದ್ದು, ಸಮಯ ಕಳೆಯುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಡಳಿತ ತಂಡ ಬೆಂಕಿ ಕೆನ್ನಾಲಿಗೆ ನಂದಿಸಲು ಮುಂದಾದರು. ರಾತ್ರಿಯಿಡೀ 8 ಅಗ್ನಿ ಶಾಮಕ ವಾಹನಗಳು, ಖಾಸಗಿ ನೀರಿನ ಟ್ಯಾಂಕರ್‌ಗಳ ಮೂಲಕ ಬೆಂಕಿ ನಂದಿಸುವ ಕೆಲಸವನ್ನು ಮಾಡಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸಹ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು. ಸತತ 16 ಗಂಟೆಯ ಕಾರ್ಯಾಚರಣೆಯ ಬಳಿಕ ಯಲ್ಲಪ್ಪ ಗುಂಡ್ಯಾಗೋಳ ಇರುವ ಸ್ಥಳವನ್ನು ಅಧಿಕಾರಿಗಳು ತಲುಪಿದ್ದರು. ಜೆಸಿಬಿ ಮೂಲಕ ಗೋಡೆ ಹೊಡೆದು ಸುಟ್ಟು ಕರಕಲಾಗಿದ್ದ ಯಲಪ್ಪನ ದೇಹದ ಮೂಳೆಗಳನ್ನು ಹೊರ ತೆಗೆದರು. ಬಳಿಕ ಕುಟುಂಬಸ್ಥರು, ತಹಶೀಲ್ದಾರ್‌, ಡಿಎಚ್ಒ ಸ್ಥಳ ಪಂಚನಾಮೆ ಮಾಡಿ ಮೂಳೆಯೊಂದನ್ನು ಡಿಎನ್ಎ ಟೆಸ್ಟ್‌ಗೆ ಎಫ್‌ಎಸ್‌ಎಲ್ ತಂಡ ರವಾನೆ ಮಾಡಿತು. ಬಳಿಕ ಉಳಿದ ಮೂಳೆಗಳನ್ನು ಕುಟುಂಬಸ್ಥರಿಗೆ ಚೀಲದಲ್ಲಿ ನೀಡಲಾಗಿದ್ದು, ಇದಕ್ಕೆ ಇದೀಗ ಇಡೀ ರಾಜ್ಯಾದ್ಯಂತ ಆಕ್ರೊಶಗಳು ಭುಗಿಲೆದ್ದಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+