ಬೆಳಗಾವಿ ಫ್ಲೈ ಓವರ್‌ ಯೋಜನೆ; ಪೂರ್ವಭಾವಿ ಸಿದ್ಧತೆಗಳಿಗೆ ಸೂಚನೆ

ಬೆಳಗಾವಿ, ಜನವರಿ 12: ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಹೆಚ್ಚಾಗುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿ ನಗರದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು.

Belagavi Flyover Inter Departmental Coordination Meeting

ಸಭೆಯಲ್ಲಿ ಶಾಸಕರು ಮಾತನಾಡಿ, "ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ‌ ಸುಗಮ ಸಂಚಾರದ‌ ದೃಷ್ಟಿಯಿಂದ ನಗರದಲ್ಲಿ ಫ್ಲೈಓವರ್ ನಿರ್ಮಿಸಲು ಉದ್ಧೇಶಿಸಲಾಗಿದೆ" ಎಂದು ಹೇಳಿದರು.

"ರಾಷ್ಟ್ರೀಯ ಹೆದ್ದಾರಿಯಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗಿನ 4.50 ಕಿ. ಮೀ. ಉದ್ದದ ಫ್ಲೈಓವರ್ ಮಾರ್ಗದಲ್ಲಿ ಪ್ರಮುಖ ವೃತ್ತಗಳು ಹಾಗೂ ಕೂಡು ರಸ್ತೆಗಳಿವೆ. ಇವುಗಳನ್ನು ಗಮನದಲ್ಲಿಟ್ಟುಕೊಂಡು ಸಮರ್ಪಕ ಯೋಜನೆ ರೂಪಿಸಬೇಕು. ಭವಿಷ್ಯದ ಸಂಚಾರ ದಟ್ಟಣೆಯ ಸಮರ್ಪಕ‌ ನಿರ್ವಹಣೆಗೆ ಇದು ಸಹಕಾರಿಯಾಗಲಿದೆ" ಎಂದರು.

"ಸಂಕೇಶ್ವರ ಕಡೆಯಿಂದ ಆಗಮಿಸುವ ವಾಹನಗಳು ಫ್ಲೈಓವರ್ ಮೂಲಕ ಮಾತ್ರವಲ್ಲದೇ ಈಗಿರುವ ಸರ್ವೀಸ್ ರಸ್ತೆಗಳ ಮೂಲಕವೂ ನಗರ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. ಬೃಹತ್ ವಾಹನಗಳ ಸಂಚಾರ, ಪಾದಚಾರಿಗಳು ಸೇರಿದಂತೆ ಪ್ರತಿಯೊಂದು ಸಂಗತಿಯನ್ನು ಪರಿಗಣಿಸಿ ಅತ್ಯುತ್ತಮ ಯೋಜನೆ ಜಾರಿಗೊಳಿಸಬೇಕು" ಎಂದು ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಯೋಜನೆಯ ಅನುಷ್ಠಾನ ಹಾಗೂ ಪೂರ್ವಭಾವಿಯಾಗಿ ಮಾಡಿಕೊಳ್ಳಬೇಕಿರುವ ಸಿದ್ಧತೆಗಳನ್ನು ವಿವರಿಸಿದರು. ಬಿ. ಎಸ್. ಎನ್. ಎಲ್., ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ, ಕೆ‌ಎಸ್ಆರ್‌ಟಿಸಿ, ಕುಡಿಯುವ ನೀರು ಸರಬರಾಜು ಮತ್ತಿತರ ಇಲಾಖೆಗಳು ಸಮನ್ವಯತೆಯಿಂದ ಕೆಲಸ‌ ಮಾಡಿ ಯೋಜನೆಯ ಸಮರ್ಪಕ‌ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದು ಹೇಳಿದರು.

ಸಚಿವರ ಕನಸಿನ ಯೋಜನೆ; ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಫ್ಲೈ ಓವರ್ ನಿರ್ಮಾನ ಮಾಡಬೇಕು ಎಂಬುದು ಸಚಿವ ಸತೀಶ್ ಜಾರಕಿಹೊಳಿ ಕನಸು. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದಾಗಲೇ ಅವರು ಯೋಜನೆ ರೂಪುರೇಷೆ ತಯಾರು ಮಾಡಿದ್ದರು. ಈಗ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು, ಫ್ಲೈ ಓವರ್ ಯೋಜನೆಗೆ ಈಗ ಮರು ಚಾಲನೆ ನೀಡಿದ್ದಾರೆ.

ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳ ಸಭೆಗಳನ್ನು ನಡೆಸಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

ಈ ಯೋಜನೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಅಶೋಕ ವೃತ್ತ, ಆರ್.ಟಿ.ಓ. ವೃತ್ತ ಮತ್ತು ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಂಚಾರ ವ್ಯವಸ್ಥೆ ಸುಗಮಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. ನೂತನ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಗಳಿಗೆ ಅನುಕೂಲವಾಗುವಂತೆ ಫ್ಲೈಓವರ್ ವಿನ್ಯಾಸಗೊಳಿಸಲಾಗುತ್ತಿದೆ.

ಬೆಳಗಾವಿ ನಗರದ ಹೃದಯಭಾಗವಾಗಿರುವ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕೂಡು ರಸ್ತೆಗಳಲ್ಲಿ ದೊಡ್ಡ ಕಮಾನುಗಳಿರಲಿವೆ. ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ಇದಾಗಿರಲಿದೆ. ವಿವಿಧ ಇಲಾಖೆಗಳು ಫ್ಲೈ ಓವರ್ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+