• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ: ಬಂಡೆಗೆ ಡಿಕ್ಕಿ ಹೊಡೆದು ಸರ್ಕಾರಿ ಬಸ್ ಪಲ್ಟಿ

|

ಬೆಳಗಾವಿ, ಡಿಸೆಂಬರ್ 25: ಬೃಹತ್ ಬಂಡೆಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ 20 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹೊರವಲಯದಲ್ಲಿ ನಡೆದಿದೆ.

ಮಗುವಿನ ಜೀವ ರಕ್ಷಣೆಗೆ ಬೆಳಗಾವಿಯಲ್ಲಿ ಝೀರೋ ಟ್ರಾಫಿಕ್

ರೈಲ್ವೆ ನಿಲ್ದಾಣದಿಂದ ಗೋಕಾಕ್ ನಗರದ ಕಡೆಗೆ ಬರುತ್ತಿದ್ದ ಬಸ್, ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬ್ರಹತ್ ಬಂಡೆಗೆ ಡಿಕ್ಕಿ ಹೊಡೆದಿದೆ. ಬಸ್ ಪಲ್ಟಿಯಾಗಿದ್ದರಿಂದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಉಳಿದಂತೆ ನಿರ್ವಾಹಕ ಸೇರಿ ಹಲವು ಪ್ರಯಾಣಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗೋಕಾಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

English summary
Over 20 people were injured when a government bus collided with a Huge rock on the outskirts of Gokak city in Belagavi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X