School Holiday: ಮಂಗಳವಾರ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಜನವರಿ 21 ರಂದು ಮಂಗಳವಾರ ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ನಾಳೆ (ಜನವರಿ 21) ಗಾಂಧಿ ಭಾರತ ಸಮಾವೇಶ ನಡೆಯುತ್ತಿರುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ತಾಲೂಕಿನ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಅಂಗನವಾಡಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ರೋಷನ್ ಬೇಗ್ ಆದೇಶ ಹೊರಡಿಸಿದ್ದಾರೆ.

belagavi holiday primary high schools on jan 21st

ಗಾಂಧಿ ಭಾರತ ಕಾರ್ಯಕ್ರಮದ ಪ್ರಯುಕ್ತ ಬೆಳಗಾವಿಯ ಸುವರ್ಣ ಸೌಧದ ಬಳಿ ಗಾಂಧಿ ಪುತ್ಥಳಿ ಅನಾವರಣ ಮಾಡಲಾಗುತ್ತಿದ್ದು, ದೇಶದ ಹಲವು ಭಾಗಗಳಿಂದ ಗಣ್ಯರು, ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸು ನಿರೀಕ್ಷೆ ಇದೆ.

ಲಕ್ಷಾಂತರ ಜನ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಇರುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಕೂಡ ಹೆಚ್ಚಾಗಲಿದ್ದು, ಅಂಗನವಾಡಿ, ಶಾಲೆಗಳಿಗೆ ಹೋಗುವ ಮಕ್ಕಳಿಗೆ ಸಮಸ್ಯೆಯಾಗುವ ಹಿನ್ನಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಶಿಕ್ಷಣ ಇಲಾಖೆ ಮಾಡಿದ ಪ್ರಸ್ತವಾವನೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಒಪ್ಪಿಕೊಂಡಿದ್ದು ರಜೆ ಘೋಷಣೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+