ಬೆಳಗಾವಿ-ಬೆಂಗಳೂರು ರೈಲು ಸಂಚಾರಕ್ಕೆ ಹಸಿರು ನಿಶಾನೆ

ಬೆಳಗಾವಿ, ಜೂನ್ 30 : ಬೆಳಗಾವಿ-ಬೆಂಗಳೂರು ತತ್ಕಾಲ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಎಸ್ ರೈಲಿಗೆ ಚಾಲನೆ ಸಿಕ್ಕಿದೆ. ಜೂನ್ 30ರಿಂದ 1 ತಿಂಗಳ ಕಾಲ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಹೇಳಿದೆ.

ಬೆಳಗಾವಿ ರೈಲು ನಿಲ್ದಾಣದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಶನಿವಾರ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಬೆಳಗಾವಿ ಬೆಂಗಳೂರು ನಡುವಿನ 610 ಕಿ.ಮೀ.ದೂರವನ್ನು ರೈಲು 10 ಗಂಟೆಗಳಲ್ಲಿ ಕ್ರಮಿಸಲಿದೆ.

ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಸುರೇಶ್ ಅಂಗಡಿ ಅವರು, 'ಮೈಸೂರು-ಧಾರವಾಡ ರೈಲನ್ನು ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರದ ಮೀರಜ್ ತನಕ ವಿಸ್ತರಣೆ ಮಾಡುವ ಚಿಂತನೆ ನಡೆದಿದೆ' ಎಂದು ಹೇಳಿದರು.

Belagavi -KSR Bengaluru special train flag off

'ಬೆಳಗಾವಿಯಿಂದ ಪುಣೆಯವರೆಗೆ ಪುಷ್‌ಪುಲ್ ರೈಲು ಆರಂಭಿಸಲು ಹಾಗೂ ಬೆಳಗಾವಿಯಿಂದ ಗೋವಾದ ವಾಸ್ಕೋವರೆಗೆ ಹೊಸ ರೈಲು ಆರಂಭಿಸುವಂತೆ ಸಾಕಷ್ಟು ಬೇಡಿಕೆ ಇದೆ. ಇದರ ಬಗ್ಗೆಯೂ ಚಿಂತನೆ ಮಾಡುತ್ತಿದ್ದೇವೆ' ಎಂದು ಸಚಿವರು ತಿಳಿಸಿದರು.

ಪ್ರಯಾಣ ದರ, ನಿಲ್ದಾಣ : ಬೆಳಗಾವಿ-ಬೆಂಗಳೂರು ರೈಲು ಪ್ರಯಾಣ ದರ 2ಎಸಿ 1,755 ರೂ., 3ಎಸಿ 1,235 ರೂ., ಸ್ಲೀಪರ್ 465 ರೂ.ಗಳು. ಈ ರೈಲು ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆಗೊಳ್ಳಲಿದೆ.

ವೇಳಾಪಟ್ಟಿ : ಪ್ರತಿದಿನ ರಾತ್ರಿ 9 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರಾತ್ರಿ 9 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 7.30ಕ್ಕೆ ಬೆಂಗಳೂರು ತಲುಪಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+