ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

|
Google Oneindia Kannada News

ಬೆಳಗಾವಿ, ಮಾರ್ಚ್ 26; ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಗುರುವಾರ ಬಿಜೆಪಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.

ಶುಕ್ರವಾರ ಎಐಸಿಸಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ್ ಜಾರಕಿಹೊಳಿ ಅವರು ಅಭ್ಯರ್ಥಿಯಾಗಿದ್ದಾರೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.

ಬೆಳಗಾವಿ ಉಪಚುನಾವಣೆ; ನಾಮಪತ್ರ ಸಲ್ಲಿಕೆಬೆಳಗಾವಿ ಉಪಚುನಾವಣೆ; ನಾಮಪತ್ರ ಸಲ್ಲಿಕೆ

ಸತೀಶ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದ ಶಾಸಕರು. ಅವರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅವಕಾಶ ನೀಡಿದೆ. ದಿ. ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ.

ಉಪ ಚುನಾವಣೆ ಘೋಷಣೆ; ಬೆಳಗಾವಿ ಜಿಲ್ಲಾಧಿಕಾರಿ ವರ್ಗಾವಣೆ ಉಪ ಚುನಾವಣೆ ಘೋಷಣೆ; ಬೆಳಗಾವಿ ಜಿಲ್ಲಾಧಿಕಾರಿ ವರ್ಗಾವಣೆ

Belagavi Lok Sabha By Election: Congress Announce Satish Jarkiholi As Party Candidate

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಉಪ ಚುನಾವಣೆ ಗೆಲ್ಲಲು ತಂತ್ರಗಳನ್ನು ರೂಪಿಸುತ್ತಿವೆ. ಚುನಾವಣಾ ಕಣದಲ್ಲಿ ಎರಡೂ ಪಕ್ಷಗಳ ಪ್ರಾಬಲ್ಯ ಕಾಣುತ್ತಿದ್ದು, ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.

ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ!

ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆದ್ದರಿಂದ, ಕಾಂಗ್ರೆಸ್, ಬಿಜೆಪಿ ನಡುವಿನ ನೇರ ಹೋರಾಟಕ್ಕೆ ಉಪ ಚುನಾವಣೆ ಸಾಕ್ಷಿಯಾಗಲಿದೆ.

English summary
AICC announced Sathish Jarkiholi as Congress candidate for Belagavi loksabha by election. Election will be held on April 17, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X