• search
 • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

|

ಬೆಳಗಾವಿ, ಮಾರ್ಚ್ 29: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹರೀಶಕುಮಾರ್.ಕೆ ಅವರಿಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದರು.

ಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಯಮಕನಮರಡಿ ಕಾಂಗ್ರೆಸ್ ಶಾಸಕರಾಗಿರುವ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಪಕ್ಷ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಿಸಿತ್ತು. ಜೆಡಿಎಸ್ ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಇದು ಯಾರಿಗೆ ಲಾಭ ತಂದು ಕೊಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ಸಾವಿನಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಮಾ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

   IPL 2021ರಲ್ಲಿ ನಿಯಮಗಳಲ್ಲಿ ಬದಲಾವಣೆ ತಂದ‌ BCCI | Oneindia Kannada

   ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಸ್ಪರ್ಧಿಸಿದ್ದು, ಬೆಳಗಾವಿ ಲೋಕಸಭಾ ಚುನಾವಣೆ ಹಿಂದೆಂದಿಗಿಂತಲೂ ರೋಚಕತೆ ಪಡೆದಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

   English summary
   Satish Jarakihioli filed a nomination from Congress party on Monday for the Belagavi Lok Sabha constituency by-election.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X