ಬೆಳಗಾವಿ ಲೋಕಸಭೆ ಉಪ ಚುನಾವಣೆ ದಿನಾಂಕ ಘೋಷಣೆ

ಬೆಳಗಾವಿ, ಮಾರ್ಚ್ 16; ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ.

ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದೆ.

Belagavi Lok Sabha Seat By Election Announced

ಉಪ ಚುನಾವಣೆಗೆ ಮಾರ್ಚ್ 23ರಂದು ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್‌ 30ರ ತನಕ ನಾಮಪತ್ರಗಳನ್ನು ಸಲ್ಲಿಕೆ ಮಾಡಬಹುದು. ಏಪ್ರಿಲ್ 4 ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 17ರ ಶನಿವಾರ ಉಪ ಚುನಾವಣೆಗೆ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸುರೇಶ್ ಅಂಗಡಿ 7,61,991 ಮತಗಳನ್ನು ಪಡೆದು ಜಯಗಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾದರು.

ಸುರೇಶ್ ಅಂಗಡಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ದೆಹಲಿಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆಗಾಗಿ ದಾಖಲಾಗಿದ್ದರು. 2020ರ ಸೆಪ್ಟೆಂಬರ್ 23ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಎದುರಾಗಿದೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಾ. ಸಾದಣ್ಣನವರ್ ಅಭ್ಯರ್ಥಿಯಾಗಿದ್ದರು. 3,70,687 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈಗ ಉಪ ಚುನಾವಣೆಯಲ್ಲಿ ಯಾರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ? ಕಾದು ನೋಡಬೇಕು.

ಬೆಳಗಾವಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತಯಾರಿಯನ್ನು ನಡೆಸುತ್ತಿವೆ. ಬಿಜೆಪಿ ದಿ. ಸುರೇಶ್ ಅಂಗಡಿ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಿದೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+