ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಉಪ ಚುನಾವಣೆ; 5 ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ

|
Google Oneindia Kannada News

ಬೆಳಗಾವಿ, ಮಾರ್ಚ್ 24: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮಂಗಳವಾರ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ಮಾರ್ಚ್ 30ರ ತನಕ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಸುರೇಶ್ ಅಂಗಡಿ ಅವರ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ಎದುರಾಗಿದೆ. ದಿ. ಸುರೇಶ್ ಅಂಗಡಿ ಕುಟುಂಬ ಸದಸ್ಯರಿಗೆ ಟಿಕೆಟ್ ದೊರೆಯಲಿದೆ ಎಂಬ ಸುದ್ದಿಗಳು ಹಬ್ಬಿವೆ. ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಉಪ ಚುನಾವಣೆ ಘೋಷಣೆ; ಬೆಳಗಾವಿ ಜಿಲ್ಲಾಧಿಕಾರಿ ವರ್ಗಾವಣೆ ಉಪ ಚುನಾವಣೆ ಘೋಷಣೆ; ಬೆಳಗಾವಿ ಜಿಲ್ಲಾಧಿಕಾರಿ ವರ್ಗಾವಣೆ

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುವ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಬಿಜೆಪಿ ಘಟಕ ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಿದೆ. ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳಿಸಲಾಗಿದೆ.

ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಬೆಳಗಾವಿ ಉಪ ಚುನಾವಣೆ; ಕಣದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ!

ಹೈಕಮಾಂಡ್ ನಾಯಕರು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಮಾರ್ಚ್ 25 ಅಥವ 26ರಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೂ ಅಭ್ಯರ್ಥಿ ಘೋಷಣೆ ಮಾಡಬೇಕಿದೆ.

 ಸಿಡಿ ಸಂಕಟ; ಬೆಳಗಾವಿ ಉಪ ಚುನಾವಣೆಗೆ ಪರ್ಯಾಯ ನಾಯಕತ್ವ? ಸಿಡಿ ಸಂಕಟ; ಬೆಳಗಾವಿ ಉಪ ಚುನಾವಣೆಗೆ ಪರ್ಯಾಯ ನಾಯಕತ್ವ?

ಅರುಣ್ ಸಿಂಗ್ ಸಭೆಯಲ್ಲಿದ್ದರು

ಅರುಣ್ ಸಿಂಗ್ ಸಭೆಯಲ್ಲಿದ್ದರು

ಕಳೆದ ವಾರ ನಡೆದ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಐದು ಹೆಸರುಗಳನ್ನು ಅಂತಿಮಗೊಳಿಸಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಈ ಸಭೆಯಲ್ಲಿದ್ದರು. ಪಟ್ಟಿಯಲ್ಲಿರುವ ಹೆಸರುಗಳನ್ನೇ ಹೈಕಮಾಂಡ್ ತೆಗದುಕೊಳ್ಳಲಿದೆಯೇ? ಕಾದುದ ನೋಡಬೇಕು.

ಯಾರ-ಯಾರ ಹೆಸರುಗಳು?

ಯಾರ-ಯಾರ ಹೆಸರುಗಳು?

ಸಚಿವ ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್‌, ಸಚಿವ ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ, ವೈದ್ಯರಾಗಿರುವ ಗಿರೀಶ್ ಸೋನ್ವಾಲ್ಕರ್, ರಾಜ್ಯ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಡಾ. ರವಿ ಪಾಟೀಲ ಅವರ ಹೆಸರುಗಳನ್ನು ಹೈಕಮಾಂಡ್‌ಗೆ ಕಳಿಸಲಾಗಿದೆ.

ಅಮಿತ್ ಶಾ ಭೇಟಿಯಾದ ಗಿರೀಶ್

ಅಮಿತ್ ಶಾ ಭೇಟಿಯಾದ ಗಿರೀಶ್

ಕೇಂದ್ರ ಗೃಹ ಸಚಿವ ಅಮಿತ್ ಶಾ ವೈದ್ಯರಾಗಿರುವ ಗಿರೀಶ್ ಸೋನ್ವಾಲ್ಕರ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಅಮಿತ್ ಶಾ ಆಹ್ವಾನದ ಮೇರೆಗೆ ಗಿರೀಶ್ ಅವರನ್ನು ಭೇಟಿಯಾಗಿದ್ದರು. ಟಿಕೆಟ್ ಸಿಗುವ ವಿಶ್ವಾಸದಲ್ಲಿ ಅವರಿದ್ದಾರೆ.

ಒಟ್ಟಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಒಟ್ಟಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 30 ಕೊನೆಯ ದಿನವಾಗಿದೆ. ಹಲವು ಟಿಕೆಟ್ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮೂರು ಕ್ಷೇತ್ರಗಳಿಗೆ ಒಟ್ಟಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.

English summary
Karnataka BJP unit sent 5 names for the Belagavi loksabha by election candidate selection. By election will be held on April 17, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X