ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ ಬೆಳಗಾವಿ-ಮಹಾರಾಷ್ಟ್ರ ಬಸ್ ಸಂಚಾರ ಆರಂಭ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 23: ಕೊರೊನಾ ಸೋಂಕಿನ ಕಾರಣದಿಂಕೊರೊನಾ ಸೋಂಕಿನ ಕಾರಣದಿಂದ ಆರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ಬಸ್ ಸಂಚಾರ ಇಂದು ಮತ್ತೆ ಆರಂಭವಾಗಿದೆ. ದ ಆರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ಬಸ್ ಸಂಚಾರ ಇಂದು ಮತ್ತೆ ಆರಂಭವಾಗಿದೆ. ಮೊದಲ ದಿನವಾದ ಇಂದು ಬಸ್ ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿತ್ತು.

ಗಡಿ ಜಿಲ್ಲೆ ಬೆಳಗಾವಿಯಿಂದ ಪ್ರತಿನಿತ್ಯ ಗೋವಾ, ಮಹಾರಾಷ್ಟ್ರಕ್ಕೆ ಸಾವಿರಾರು ಜನ ಸಂಚಾರ ಮಾಡುತ್ತಿದ್ದರು. ಆದರೆ, ಆರು ತಿಂಗಳುಗಳಿಂದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದುದರಿಂದ ಬಸ್ ಸಂಚಾರವನ್ನು ಇದುವರೆಗೂ ಪ್ರಾರಂಭಿಸಿರಲಿಲ್ಲ. ಇದೀಗ ಮತ್ತೆ ಬಸ್ ಸಂಚಾರ ಆರಂಭಗೊಂಡಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಸ್ಥಗಿತ

ಇಂದು ಬೆಳಗಾವಿ- ಕೊಲ್ಹಾಪುರ, ಬೆಳಗಾವಿ - ಪುಣೆ, ಬೆಳಗಾವಿ- ಮುಂಬೈ, ಬೆಳಗಾವಿ- ಸಾವಂತವಾಡಿ ಸೇರಿ ಅನೇಕ ಬಸ್ ಗಳ ಸಂಚಾರಕ್ಕೆ ವಾಯವ್ಯ ಸಾರಿಗೆ ಇಲಾಖೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಗಳನ್ನು ಬಿಡಲು ತೀರ್ಮಾನಿಸಲಾಗಿದೆ.

Belagavi Maharashtra Bus Service Resumed After Six Months

 ಪ್ರಯಾಣಿಕರ ಹೆಚ್ಚಳಕ್ಕೆ ವಾಯವ್ಯ ಸಾರಿಗೆ ಮಾಡಿದೆ ಹೊಸ ಯತ್ನ ಪ್ರಯಾಣಿಕರ ಹೆಚ್ಚಳಕ್ಕೆ ವಾಯವ್ಯ ಸಾರಿಗೆ ಮಾಡಿದೆ ಹೊಸ ಯತ್ನ

ಕಳೆದ ಆರು ತಿಂಗಳಲ್ಲಿ ಬೆಳಗಾವಿ ಸಾರಿಗೆ ವಿಭಾಗಕ್ಕೆ 110 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಇದೀಗ ದಿನದಿಂದ ದಿನಕ್ಕೆ ಪ್ರಯಾಣಿಕರು ಸಾರಿಗೆ ಬಸ್ ಗಳತ್ತ ಮುಖ ಮಾಡುತ್ತಿರುವುದರಿಂದ ಸಾರಿಗೆ ಇಲಾಖೆಯ ನಷ್ಟ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಮುಂದಿನ ದಿನದಲ್ಲಿ ಇಲಾಖೆ ಚೇತರಿಕೆ ಆಗುವ ನಿರೀಕ್ಷೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳಿದ್ದಾರೆ. ಪ್ರಯಾಣಿಕರ ಸುರಕ್ಷತೆಗೆ ಇಲಾಖೆ ಅನೇಕ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡು ಬಸ್ ಗಳನ್ನು ಆರಂಭಿಸಿದೆ.

English summary
The Belagavi-Maharashtra bus service has resumed today after six months. Passengers are in less number
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X