ಬೆಳಗಾವಿ ಪರಿಷತ್ ಫಲಿತಾಂಶ: ಬಿಜೆಪಿಗೆ ಮುಖಭಂಗ; ಗೆದ್ದವರಾರು?
ಬೆಳಗಾವಿ, ಡಿಸೆಂಬರ್ 14: ಕರ್ನಾಟಕದ ರಾಜಕಾರಣ ಒಂದು ತೂಕವಾದರೆ, ಗಡಿ ಜಿಲ್ಲೆ ಬೆಳಗಾವಿ ರಾಜಕಾರಣದ್ದೆ ಒಂದು ತೂಕ. ಇಲ್ಲಿ ಕುಟುಂಬ ರಾಜಕಾರಣ ಬಹಳ ಸದ್ದು ಮಾಡುತ್ತದೆ. ಇಲ್ಲಿ ಏನೇ ಸುದ್ದಿಗಳಾದರೂ ರಾಜಕೀಯ ಪ್ರತಿಷ್ಠೆಗಾಗಿ ನಡೆದಿರುತ್ತದೆ.
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ತೀವ್ರ ಪೈಪೋಟಿಯಿಂದ ಕೂಡಿದ್ದ ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದು ಬಿಜೆಪಿಗೆ ಮುಖಭಂಗ ಅನುಭವಿಸುವಂತಾಗಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ರಾಜಕೀಯ ಗುದ್ದಾಟಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆಯ ಫಲಿತಾಂಶ ಎಲ್ಲಾ ಕ್ಷೇತ್ರಗಳಿಗಿಂತ ಅತಿ ಹೆಚ್ಚು ಮಹತ್ವ ಪಡೆದಿತ್ತು.
ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಯನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬ ಉದ್ದೇಶದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ಹೊರತಾಗಿಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರು.

ಬಿಜೆಪಿಗೆ ಮುಳುವಾದ ಜಾರಕಿಹೊಳಿ ಪಾಲಿಟಿಕ್ಸ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಕಿರಿಯ ಸಹೋದರ ಲಖನ್ ಜಾರಕಿಹೊಳಿಯನ್ನು ಎರಡನೇ ಪ್ರಾಶಸ್ತ್ಯ ಮತಕ್ಕಾಗಿ ಕಣಕ್ಕಿಳಿಸಿದ್ದರು. ನಾವು ಲಖನ್‌ಗೆ ಬಿಜೆಪಿ ಟಿಕೆಟ್ ಕೇಳಿಲ್ಲ. ನಮ್ಮ ಮೊದಲ ಆದ್ಯತೆ ನಮ್ಮ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಬೇಕು. ಎರಡನೇಯದು ಕಾಂಗ್ರೆಸ್ ಅಭ್ಯರ್ಥಿ ಸೋಲಬೇಕು. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಏನೇನು ಮಾಡಬೇಕು ಅದನ್ನು ಮಾಡುತ್ತೇನೆ ಎಂದು ಚುನಾವಣಾ ಪೂರ್ವದಲ್ಲಿ ಹೇಳಿದ್ದರು.
ಆದರೆ ಈಗ ಸಹೋದರ ಲಖನ್ ಜಾರಕಿಹೊಳಿ ಎರಡನೇ ಪ್ರಾಶಸ್ತ್ಯದ ಮತಗಳ ಮೂಲಕ ಗೆದ್ದಿದ್ದು, ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮೂರನೇ ಸ್ಥಾನಕ್ಕೆ ಕುಸಿತ ಕಂಡು ಮುಖಭಂಗ ಅನುಭವಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿಯೂ ಹಿನ್ನಡೆಯಾಗಿದೆ.

ವಿಧಾನ ಪರಿಷತ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ರಮೇಶ್ ಜಾರಕಿಹೊಳಿ ನಿರ್ಧಾರ ಬಿಜೆಪಿಗೆ ಮುಳುವಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
Recommended Video
ಸಹೋದರನನ್ನು ಗೆಲ್ಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಸಹೋದರ ಗೆಲುವು ಸಾಧಿಸಿದ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಅಣ್ಣನ ನೇತೃತ್ವದಲ್ಲಿ ನಾವು ಈ ವಿಜಯವನ್ನು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.
ಸಹೋದರ ಚನ್ನರಾಜ ಹಟ್ಟಿಹೊಳಿ ಗೆಲುವಿನ ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಾವು ಈ ವಿಜಯವನ್ನು ಸಾಧಿಸಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಿದ್ದಕ್ಕೆ ನಾವೂ ಇವತ್ತು ಚುನಾವಣೆಯಲ್ಲಿ ಗೆದಿದ್ದೇವೆ ಎಂದರು.
ನಮ್ಮ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪಾದವನ್ನು ಮುಟ್ಟಿ ಧನ್ಯವಾದ ತಿಳಿಸುತ್ತೇನೆ. ಈ ಚುನಾವಣೆ ನನಗೆ ಪ್ರತಿಷ್ಠೆಯಾಗಿತ್ತು. ನನಗೆ ಮೊದಲಿನಿಂದಲೂ ಗೆಲ್ಲುವ ನಿರೀಕ್ಷೆ ಇತ್ತು. ಪ್ರಕಾಶ್ ಹುಕ್ಕೇರಿ, ಗಣೇಶ್ ಹುಕ್ಕೇರಿ, ಅಂಜಲಿ ನಿಂಬಾಳ್ಕರ್, ಎ.ಬಿ. ಪಾಟೀಲ್, ಕಾಕಾ ಸಾಹೇಬ್ ಪಾಟೀಲ್, ವೀರ್ ಕುಮಾರ್ ಪಾಟೀಲರು, ಮಹೇಶ್ ತಮ್ಮಣ್ಣ, ಮೋಹಿತ್, ವಿಶ್ವಾಸ್ ವೈದ್ಯ ಹೀಗೆ ಪ್ರತಿಯೊಬ್ಬರು ಸಹ ಕೆಲಸ ಮಾಡಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಲಖನ್ ಜಾರಕಿಹೊಳಿ ಸ್ಪರ್ಧಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ನಾವು ಕಣದಲ್ಲಿ ಇದ್ದ 6 ಮಂದಿಯನ್ನು ಒಂದೇ ದೃಷ್ಟಿಯಿಂದ ನೋಡಿದ್ದೇವೆ. ಮೊದಲ ದಿನದಿಂದ ಇಲ್ಲಿಯವರೆಗೂ ಅವರು ಏನೇ ಮಾತನಾಡಿದ್ದರೂ ಅದ್ಯಾವುದಕ್ಕೂ ನಾವು ತಲೆ ಕೆಡಿಸಿಕೊಂಡಿಲ್ಲ. ಸಂಘಟಿತವಾಗಿ ಚುನಾವಣೆ ಪ್ರಚಾರ ಮಾಡಿದ್ದೇವು. ಅದರ ಫಲವೇ ಇಂದು ನಮ್ಮ ಗೆಲುವು. ಸಮಾಜ ನನ್ನ ಕೈ ಹಿಡಿದಿದೆ. ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದ ನೇತೃತ್ವ ಇಂದು ವಿಜಯ ಶಾಲಿಯಾಗಿದೆ ಎಂದು ಹೇಳಿದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications