ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: 519 ಮಂದಿ ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಳಗಾವಿ, ಆಗಸ್ಟ್ 24: ಗಡಿ ಜಿಲ್ಲೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಸಲ್ಲಿಕೆಯ ಕಾರ್ಯ ಸೋಮವಾರ (ಆ.23) ಮುಕ್ತಾಯವಾಗಿದ್ದು, ಈ ಚುನಾವಣೆಯಲ್ಲಿ ಆಕಾಂಕ್ಷಿಗಳ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದೆ.

ಬೆಳಗಾವಿ ಮಹಾನಗರ ಪಾಲಿಕೆಯ ಒಟ್ಟು 58 ವಾರ್ಡ್​ಗಳಿಗೆ ಚುನಾವಣೆ ನಡೆಯಲಿದ್ದು, 519 ಜನ ಅಭ್ಯರ್ಥಿಗಳ ತಮ್ಮ ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಈ ಸಲ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆಯಲಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಟಿಕೆಟ್ ವಂಚಿತರು ಸೆಡ್ಡು ಹೊಡೆದಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಗಿದೆ.

ಮೈಸೂರು ಮಹಾನಗರ ಪಾಲಿಕೆ ಉಪ ಚುನಾವಣೆ; 6 ನಾಮಪತ್ರ ಸಲ್ಲಿಕೆಮೈಸೂರು ಮಹಾನಗರ ಪಾಲಿಕೆ ಉಪ ಚುನಾವಣೆ; 6 ನಾಮಪತ್ರ ಸಲ್ಲಿಕೆ

ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಹೆಚ್ಚಾಗಿದ್ದು, 50ಕ್ಕೂ ಹೆಚ್ಚು ಜನರು ಎರಡು ಪಕ್ಷಗಳಿಂದ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಇನ್ನು ನಾಮಪತ್ರ ವಾಪಸ್ ಪ್ರಕ್ರಿಯೆ ಆಗಸ್ಟ್ 26 ರಂದು ನಡೆಯಲಿದ್ದು, ಬಳಿಕ ಮಹಾನಗರ ಪಾಲಿಕೆಯ ಚುನಾವಣೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

Belagavi Municipal Corporation Election; Total 59 Nominations Filed

ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಮತದಾನ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದೆ. ಇದೇ ಮೊದಲ ಸಲ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಬಂಡಾಯ ಅಭ್ಯರ್ಥಿಗಳು ದೊಡ್ಡ ತಲೆನೋವು ಆಗಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ಬಹುತೇಕ ಎಲ್ಲಾ ವಾರ್ಡ್‌ನಲ್ಲಿ ಅಭ್ಯರ್ಥಿಗಳು ಕಣಕ್ಕೆ ಇಳಿಸಲಾಗಿದೆ. ಇನ್ನೂ ಕಾಂಗ್ರೆಸ್ ಪಕ್ಷ 49 ವಾರ್ಡ್‌ಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಹಾಕಿದ್ದಾರೆ.

30ಕ್ಕೂ ಹೆಚ್ಚು ವಾರ್ಡ್‌ನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಗಳ ಸ್ಪರ್ಧೆ ಮಾಡಿದರೆ, 20ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಟಿಕೆಟ್ ಹಂಚಿಕೆ ಮಾಡಲು ಮಾಡಿರುವ ರಾಷ್ಟ್ರೀಯ ಪಕ್ಷಗಳು ವಲಸಿಗರು, ಕಾರ್ಯಕರ್ತರಾಗಿ ಕೆಲಸ ಮಾಡದವರಿಗೆ ಟಿಕೆಟ್ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

Belagavi Municipal Corporation Election; Total 59 Nominations Filed

ಬಿಜೆಪಿ ಮಹಿಳಾ ಕಾರ್ಯಕರ್ತರಿಗೆ ನಾಯಕರು ಟಿಕೆಟ್ ಕೊಡಿಸುವ ಭರವಸೆ ಕೊಟ್ಟು ಕೊನೆಗೆ ಕೈ ಚೆಲ್ಲಿದ್ದಾರೆ. ಇದರಿಂದ ಸಿಟ್ಟಾದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಬೆಳಗಾವಿ ಸಂಸದೆ ಮಂಗಲಾ ಸುರೇಶ್ ಅಂಗಡಿ ಕಚೇರಿಯಲ್ಲಿ ಧರಣಿ ನಡೆಸಿದರು.

ಸಂಸದೆ ಜತೆಗೆ ವಾಗ್ವಾದವನ್ನು ನಡೆಸಿರುವ ಕಾರ್ಯಕರ್ತೆಯರು, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಬಂದ ಮುಖಂಡರಿಗೆ ಟಿಕೆಟ್ ನೀಡಿದ್ದಾರೆ ಎಂದು ಆರೋಪ ಸಹ ಮಾಡಿದ್ದಾರೆ. ಸೀಮಾ, ಪ್ರೀಯಾಂಕ, ಆರತಿ ಸೇರಿ 10ಕ್ಕೂ ಕಾರ್ಯಕರ್ತೆಯರಿಂದ ಆಕ್ರೋಶ ವ್ಯಕ್ತವಾಗಿದ್ದು, ಹಣ ಪಡೆದು ಟಿಕೆಟ್ ನೀಡದ್ದಾರೆ ಎಂದು ನೇರವಾಗಿ ಆರೋಪ ಮಾಡಿದರು.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಂತಿಮವಾಗಿ 519ರ ಜನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ ಬಿಜೆಪಿ 58 ಅಭ್ಯರ್ಥಿಗಳು, ಕಾಂಗ್ರೆಸ್‌ನಿಂದ 49 ಜನ ಅಭ್ಯರ್ಥಿಗಳು, ಜೆಡಿಎಸ್‌ನಿಂದ 12 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿದ್ದಾರೆ.

ಇನ್ನು ಎಂಐಎಂ- 6, ಎಎಪಿ- 29, ಪ್ರಜಾಕೀಯ- 1, ಎಸ್‌ಡಿಪಿಐ- 1 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು, ಪಕ್ಷೇತರರು ದೊಡ್ಡ ಸಂಖ್ಯೆಯಲ್ಲಿ ಕಣಕ್ಕೆ ಇಳಿದಿದ್ದಾರೆ. 283 ಪಕ್ಷೇತರರು ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ವಾಪಸ್ ಪಡೆಯುವ ದಿನಾಂಕದವರೆಗೆ ಯಾರು ಕಣದಲ್ಲಿರಲಿದ್ದಾರೆ ಎಂದು ಹೇಳುವುದು ಕಷ್ಟಸಾಧ್ಯ.

ಈ ಪೈಕಿ ಕಳೆದ ಸಲ ಚುನಾಯಿತರಾದ ಅನೇಕರು ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡದೇ, ಪಕ್ಷೇತರರಾಗಿ ಕಣಕ್ಕೆ ಇಳಿದಿರುವುದು ಕುತೂಹಲ ಮೂಡಿಸಿದೆ.

English summary
Belagavi Municipal Corporation Election will be held in 58 wards and 519 candidates have submitted their nomination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X