ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಹೀನಾಯ ಸೋಲಿನ ಬಳಿಕ ಮರುಚುನಾವಣೆ ನಡೆಸುವಂತೆ ಎಂಇಎಸ್ ಆಗ್ರಹ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 7: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಎಂಇಎಸ್ ಸಂಘಟನೆ ಹೀನಾಯ ಸೋಲು ಕಂಡಿದೆ. ಪಾಲಿಕೆ ಚುನಾವಣೆಯ ಸೋಲಿನ ಬೆನ್ನಲ್ಲೇ ಎಂಇಎಸ್ ಹೊಸ ಕ್ಯಾತೆ ತೆಗೆದಿದೆ.

ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಪರಾಜಯ ಅನುಭವಿಸುತ್ತಿದ್ದಂತೆ ಮಾಡುವ ಆರೋಪದಂತೆ, ಚುನಾವಣಾ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ, ವಿವಿ ಪ್ಯಾಟ್ ಬಳಸದೆ ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪ ಮಾಡಿದೆ.

ಬೆಳಗಾವಿ ಮಹಾನಗರ ಪಾಲಿಕೆ: 17 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿಬೆಳಗಾವಿ ಮಹಾನಗರ ಪಾಲಿಕೆ: 17 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ

ಈ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿ ಜಿಲ್ಲಾಧಿಕಾರಿ ನಿವಾಸಕ್ಕೆ ತೆರಳಿದ್ದ ಎಂಇಎಸ್ ಕಾರ್ಯಕರ್ತರು ಅಲ್ಲಿ ಹೈಡ್ರಾಮಾ ಮಾಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ. ವಿವಿ ಪ್ಯಾಟ್ ಬಳಸದೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿವಾಸದ ಮುಂದೆ‌ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Belagavi Municipal Corporation Elections; MES Demand To Conduct Reelections After Losing

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿನ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನಿವಾಸದಲ್ಲಿ ಎಂಇಎಸ್ ಪುಂಡರು ಗಲಾಟೆ ಮಾಡಿದ್ದು, ಬೆಳಗಾವಿ ಮಹಾನಗರ ಪಾಲಿಕೆಗೆ ಮರುಚುನಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಪಾಳಿಕೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಬಳಸದ ಬಗ್ಗೆ ಕೆಲ ಅಭ್ಯರ್ಥಿಗಳು ಆಗಸ್ಟ್ 31ರಂದೇ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೂ ಇದನ್ನು ಗಮನಕ್ಕೆ ತೆಗೆದುಕೊಳ್ಳದೇ ಚುನಾವಣೆ ನಡೆಸಲಾಗಿದೆ ಎಂದು ಎಂಇಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಗೆದ್ದವರ ಪಟ್ಟಿಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಗೆದ್ದವರ ಪಟ್ಟಿ

ಸಮಸ್ಯೆ ಬಗೆಹರಿಯುವವರೆಗೂ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಮಾಡಿಸದಂತೆಯೂ ಮನವಿ ಮಾಡಿದ್ದಾರೆ. ಇಲ್ಲವಾದರೆ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗಾಲಾಗಿರುವ ಎಂಇಎಸ್ ಪುಂಡರು ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ.

ಬಿಜೆಪಿ ಜಯಭೇರಿ
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆ ಏರಿದ್ದು, ಎಂಇಎಸ್ ಮತ್ತು ಕಾಂಗ್ರೆಸ್ ವಿರುದ್ಧ ಅಮೋಘ ಜಯ ಸಾಧಿಸಿದೆ.

ಬೆಳಗಾವಿಯಲ್ಲಿ ಬರೊಬ್ಬರಿ 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಚಿನ್ಹೆಗಳನ್ನು ಮುಂದಿಟ್ಟುಕೊಂಡು ಸ್ಪರ್ಧೆಗೆ ಇಳಿದಿದ್ದರು. ಸೋಮವಾರ ಅದರ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ ನಗರದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರುವುದು ಖಚಿತವಾಗಿದೆ.

ಬೆಳಗಾವಿಯ 58 ವಾರ್ಡ್ (28 ಮ್ಯಾಜಿಕ್ ನಂಬರ್) ಗಳಿಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ವಿವರ ಹೀಗಿದೆ.
ಬಿಜೆಪಿ: 34
ಕಾಂಗ್ರೆಸ್: 9
ಎಂಇಎಸ್ ಸೇರಿದಂತೆ ಪಕ್ಷೇತರರು 13 ಸ್ಥಾನ ಗಳಿಸಿವೆ.

English summary
MES defeated in Belagavi Municipal Corporation Elections and demand to conduct reelections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X