ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಮಹಾನಗರ ಪಾಲಿಕೆ: 17 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 6: ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಹೀಗಿರುವಂತೆಯೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ.

ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದ್ದು, ಘೋಷಣೆಯೊಂದೇ ಬಾಕಿ ಇದೆ.

ಬೆಳಗಾವಿಯಲ್ಲಿ ಬರೊಬ್ಬರಿ 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಚಿನ್ಹೆಗಳನ್ನು ಮುಂದಿಟ್ಟುಕೊಂಡು ಸ್ಪರ್ಧೆಗೆ ಇಳಿದಿದ್ದರು. ಇದೀಗ ಅದರ ಫಲಿತಾಂಶ ಪ್ರಕಟವಾಗುತ್ತಿದ್ದು, ಬೆಳಗಾವಿ ನಗರದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರುವುದು ಖಚಿತವಾಗಿದೆ.

Belagavi Municipal Election Results 2021: BJP Back To Power After 17 Years

ಬೆಳಗಾವಿಯ ಒಟ್ಟು 58 ವಾರ್ಡ್‌ಗಳ ಪೈಕಿ ಈಗಾಗಲೇ ಬಿಜೆಪಿ 33 ವಾರ್ಡ್‌ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಇಲ್ಲಿ ಅಧಿಕಾರ ಹಿಡಿಯಲು ಮ್ಯಾಜಿಕ್ ನಂಬರ್ 28 ಆಗಿದೆ. ಹೀಗಾಗಿ ಬಹುಮತ ನಂಬರ್‌ನ್ನು ದಾಟಿರುವ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

ಉಳಿದಂತೆ ಕಾಂಗ್ರೆಸ್ ಪಕ್ಷ 5 ವಾರ್ಡ್‌ಗಳಲ್ಲಿ ಮತ್ತು ಎಂಇಎಸ್ 2 ವಾರ್ಡ್‌ಗಳಲ್ಲಿ ಜಯ ಸಾಧಿಸಿವೆ. 1 ವಾರ್ಡ್‌ನಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜಯ ಸಾಧಿಸಿದೆ.

15ನೇ ವಾರ್ಡ್ ನಲ್ಲಿ ಬಿಜೆಪಿಯ ನೇತ್ರಾವತಿ ವಿನೋದ ಭಾಗವತ್, ವಾರ್ಡ್ ನಂಬರ್ 14 ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಶಿವಾಜಿ ಮಂಡೋಳಕರ್ ಮತ್ತು ವಾರ್ಡ್ ನಂಬರ್ 40ರಲ್ಲಿ ಬಿಜೆಪಿಯ ಹೇಮಾ ಕಾಮ್ಕರ್ ಗೆಲುವು ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

English summary
This is the first time that the BJP's rise to power in Belagavi city corporation is almost certain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X