ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆಗೆ ಕೊವಿಡ್-19 ಸೋಂಕು

|
Google Oneindia Kannada News

ಬೆಳಗಾವಿ, ಜುಲೈ.14: ರಾಜ್ಯದಲ್ಲಿ ನೊವೆಲ್ ಕೊರೊನಾವೈರಸ್ ಹಾವಳಿಗೆ ಸಾಮಾನ್ಯ ಜನರಷ್ಟೇ ಅಲ್ಲ ಮುಖ್ಯಮಂತ್ರಿ ಆದಿಯಾಗಿ ಸಚಿವರು ಮತ್ತು ಶಾಸಕರು ಹಾಗೂ ರಾಜಕೀಯ ಮುಖಂಡರು ಸಹ ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಅವರಿಗೂ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಜುಲೈ.13ರಂದು ಶಾಸಕರ ಜನ್ಮದಿನವಾಗಿದ್ದು ತಮ್ಮ ನಿವಾಸದಲ್ಲಿಯೇ ಅನಿಲ್ ಬೆನಕೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ ರಿಗೆ ಕೊರೊನಾವೈರಸ್ಜೇವರ್ಗಿ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ ರಿಗೆ ಕೊರೊನಾವೈರಸ್

ಕಳೆದ ನಾಲ್ಕು ದಿನಗಳ ಹಿಂದೆಯೇ ಸೋಂಕಿತ ಲಕ್ಷಣ ಕಂಡು ಬಂದಿದ್ದು, ಶಾಸಕರನ್ನು ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರಿಗೂ ಸೋಂಕು ತಗಲಿರುವುದು ದೃಢಪಟ್ಟಿತ್ತು.

 Belagavi North MLA Anil Benake Get Covid-19 Positive: BJP MLA In Home Quarantine

ಹೋಮ್ ಕ್ವಾರೆಂಟೈನ್ ನಲ್ಲಿ ಕೌರವ:

ಈಗಾಗಲೇ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೂ ಕೊರೊನಾವೈರಸ್ ಸೋಂಕಿನ ಭೀತಿ ಎದುರಾಗಿದೆ. ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ಇರುವ ಸಚಿವರ ಸಂಬಂಧಿಕರೊಬ್ಬರಿಗೆ ಕೊವಿಡ್-19 ಸೋಂಕು ತಗಲಿರುವುದು ಆತಂಕವನ್ನು ಹುಟ್ಟಿಸಿದೆ. "ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ, ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರ ಜತೆ ಸಂಪರ್ಕದಲ್ಲಿ ಇದ್ದ, ನಾನು ಹಿರೇಕೆರೂರಿನ ಮನೆಯಲ್ಲಿ ಕ್ವಾರಂಟೈನ್ ಆಗುತ್ತಿದ್ದು, ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ" ಎಂದು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದರು.

English summary
Belagavi North MLA Anil Benake Get Covid-19 Positive: BJP MLA In Home Quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X