ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಭೀಕರ ರಸ್ತೆ ಅಪಘಾತ, ಜವರಾಯನ ಅಟ್ಟಹಾಸಕ್ಕೆ ಎಎಸ್ಐ ಪತ್ನಿ ಸೇರಿ ನಾಲ್ವರು ಬಲಿ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್‌ 25: ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಕುಡುಚಿ ಪೊಲೀಸ್ ಠಾಣೆಯ ಎಎಸ್ಐ ವೈ. ಎಂ ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಓರ್ವ ಅಜ್ಜಿ ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಕಾರ್‌ ಡ್ರೈವರ್ ನಿಖಿಲ್ ಕದಂ(24), ಬೆಳಗಾವಿ ನಿವಾಸಿ ರುಕ್ಮಿಣಿ ಹಳಕಿ(48), ಅಕ್ಷತಾ ಹಳಕಿ(22), ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತಪಟ್ಟವರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಕಾರು, ಬೈಕ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ‌. ಅಪಘಾತದಲ್ಲಿ ಕುಡಚಿ ಪೊಲೀಸ್ ಠಾಣೆ ಎಎಸ್ಐ ವೈ. ಎಂ ಹಲಕಿರವರ ಪತ್ನಿ ರುಕ್ಮಿಣಿ, ಪುತ್ರಿ ಹಾಗೂ ಚಾಲಕ, ಬೈಕ್ ಮೇಲೆ ಹೋಗುತ್ತಿದ್ದ ಓರ್ವ ಅಜ್ಜಿ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ‌. ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಡಾ. ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಮಳೆಯಿಂದ ಬೆಳೆಹಾನಿ, ರೈತರ ಖಾತೆಗೆ 17.01 ರೂ. ಕೋಟಿ ಪರಿಹಾರ ಜಮೆ: ಬೆಳಗಾವಿ ಡಿಸಿ ನಿತೇಶ್ ಪಾಟೀಲ್ಮಳೆಯಿಂದ ಬೆಳೆಹಾನಿ, ರೈತರ ಖಾತೆಗೆ 17.01 ರೂ. ಕೋಟಿ ಪರಿಹಾರ ಜಮೆ: ಬೆಳಗಾವಿ ಡಿಸಿ ನಿತೇಶ್ ಪಾಟೀಲ್

ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್ಐ ಕುಟುಂಬದಲ್ಲಿ ಮೂವರು ಮೃತರಾಗಿದ್ದಾರೆ. ಬೈಕ್​ನಲ್ಲಿ ಹೋಗುತ್ತಿದ್ದ ಓರ್ವ ಅಜ್ಜಿ ಸಾವನ್ನಪ್ಪಿದ್ದಾರೆ.

Belagavi Road Accident, Four Dead Including ASI wife

ಬೆಳಗಾವಿ-ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್​ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು. ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

English summary
Four people died in terrifying road accident at Budigoppa Cross in Savadatti Taluk. Wife of ASI YM Halaki is among the 4 people dead. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X