ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ
ಬೆಳಗಾವಿ, ಡಿಸೆಂಬರ್ 18: ಬೆಳಗಾವಿಯಲ್ಲಿ ಕೆಲವು ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ.
ಅಲ್ಲಿನ ಅನಗೋಳದ ಕನಕದಾಸ ಕಾಲೊನಿಯಲ್ಲಿ ಪ್ರತಿಷ್ಠಾಪಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಶನಿವಾರ ಬೆಳಗಿನ ಜಾವ ಭಗ್ನಗೊಳಿಸಲಾಗಿದೆ. ತಿಲಕವಾಡಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ತೆರಳಿ ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಮುಖದ ಭಾಗವನ್ನು ವಿರೂಪಗೊಳಿಸಿದ್ದಾರೆ. ಇದಕ್ಕಾಗಿ ತಲ್ವಾರ್ ಬಳಸಿದ್ದಾರೆ ಎನ್ನಲಾಗಿದೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ರಾಯಣ್ಣನ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಸ್ಥಳದಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ತಿಲಕವಾಡಿ ಪೊಲೀಸ್ ಠಾಣೆಗೆ ಅಭಿಮಾನಿಗಳು ಬರುತ್ತಿದ್ದಾರೆ.
ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದವರು ಯಾರೇ ಆಗಿದ್ದರೂ ಮುಲಾಜು ಇಲ್ಲದೆ ಅವರನ್ನು ವಶಕ್ಕೆ ಪಡೆದು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.












Click it and Unblock the Notifications