ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸಿಬಿ ಬಲೆಗೆ ಬಿದ್ದ ಬೆಳಗಾವಿ ಸ್ಮಾರ್ಟ್‌ಸಿಟಿ ಜನರಲ್ ಮ್ಯಾನೇಜರ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮಾರ್ಚ್ 18: ಬೆಳಗಾವಿ ಸ್ಮಾರ್ಟ್‌ ಸಿಟಿ ಲಿಮಿಟೆಡ್ ಟೆಕ್ನಿಕಲ್ ಜನರಲ್ ಮ್ಯಾನೇಜರ್ ಮೇಲೆ ಎಸಿಬಿ ದಾಳಿ ನಡೆಸಿದೆ.

ಪ್ರಾಜೆಕ್ಟ್‌ ಮ್ಯಾನೇಜರ್ ಬಳಿ 60 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಪೂರ್ವಾ ಕನ್ಸ್ಟ್ರಕ್ಷನ್ ಕಂಪನಿ ಪ್ರಾಜೆಕ್ಟ್ ಮ್ಯಾನೇಜರ್ ಬಳಿ ಲಂಚ ಪಡೆಯುತ್ತಿದ್ದ ಸಮಯದಲ್ಲಿ ಎಸಿಬಿ ದಾಳಿ ನಡೆಸಿದೆ.

ಮ್ಯಾನೇಜರ್ ಬೆಳಗಾವಿ ಸಿಟಿ ಬಸ್ ನಿಲ್ದಾಣದ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರೊಜೆಕ್ಟ್ ಮ್ಯಾನೇಜರ್ ಸಂಜೀವ ಕುಮಾರ್ ಬಳಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ.

Belagavi Smart City Officer Caught For Graft

ಸಿದ್ದನಾಯ್ಕ ದೊಡ್ಡಬಸಪ್ಪ ಎಸಿಬಿ ಬಲೆಗೆ ಬಿದ್ದ ಅಧಿಕಾರಿ, ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ, ಮನೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ 23.56 ಲಕ್ಷ ಅಕ್ರಮ ಹಣ ಪತ್ತೆಯಾಗಿದೆ.

Recommended Video

ಹೈ ಕಮಾಂಡ್ ಅವಕಾಶ ಕೊಟ್ಟರೆ ನಾನು ಸ್ಪರ್ಧೆ ಮಾಡ್ತೀನಿ | Sathish Jarakiholi | Oneindia Kannada

ಅಧಿಕಾರಿ ಸಿದ್ದನಾಯ್ಕ ದೊಡ್ಡಬಸಪ್ಪ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ, ಎಸಿಬಿ ಬೆಳಗಾವಿ ಉತ್ತರ ವಲಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ, ಎಸಿಬಿ ಪೊಲೀಸ್ ಅಧೀಕ್ಷಕ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ನಡೆದ ದಾಳಿ ನಡೆದಿದೆ.

English summary
Anti-Corruption Bureau officers caught a senior officer of the Smart City project, while he was accepting a bribe from a contractor in Belagavi on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X