Get Updates
Get notified of breaking news, exclusive insights, and must-see stories!

Trade Fair-2024: ಡಿ.26ರಿಂದ ವ್ಯಾಪಾರ ಮೇಳ: ವಿಶೇಷತೆಗಳೇನು? ಏನೆಲ್ಲ ಇರಲಿದೆ

ಬೆಳಗಾವಿ, ಡಿಸೆಂಬರ್ 25: ಮಹಿಳೆಯರನ್ನು ಆರ್ಥಿಕವಾಗಿ ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನೇಕ ಯೋಜನೆ ರೂಪಿಸುತ್ತಿದೆ. ಸರ್ಕಾರದ ಅನೇಕ ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಇದರ ಮುಂದುವರಿದ ಭಾಗವಾಗಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್‌ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದೆ. ನಾಳೆ ಡಿಸೆಂಬರ್ 26ರಿಂದಲೇ ಈ ವ್ಯಾಪಾರ ಮೇಳವು ಚಾಲನೆಗೊಳ್ಳಲಿದೆ.

ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಈ ಮೇಳ ನಡೆಯಲಿದೆ. ಡಿಸೆಂಬರ್‌ 26 ರಿಂದ ಜನವರಿ 4 ರವರೆಗೆ ಮೇಳ ಕಣ್ತುಂಬಿಕೊಳ್ಳಬಹುದು. ಮಹಿಳೆಯರು ಉತ್ಪಾದಿಸಿದ ವಸ್ತುಗಳ ಖರೀದಿಗೂ ಅವಕಾಶ ಇದೆ.

Belagavi Trade Fair 2024 organised from December 26th

ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡಲಾಗುತ್ತಿದೆ. ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗ ಪಡೆಯುವಂತೆ ಜಿಲ್ಲಾಡಳಿತ ಕೋರಿದೆ. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚಿನ ವಹಿವಾಟಿನೊಂದಿಗೆ ಅವರ ಆರ್ಥಿಕ ಸಬಲತೆಗೆ ಕೈ ಜೋಡಿಸಲಿದ್ದಾರೆ ಎಂದು ಇಲಾಖೆಗಳು ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿವೆ.

ಮಹಿಳಾ ಉತ್ಪನ್ನಗಳಿಗೆ ರಾಷ್ಟ್ರಮಟ್ಟದಲ್ಲಿ ಮಾರುಕಟ್ಟೆ ವ್ಯವಸ್ಥೆ

ಮಹಿಳೆಯರ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿ ಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಹಾಗೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳನ್ನು ಆಯೋಜಿಸುವ ಮೂಲಕ ಮಾರುಕಟ್ಟೆ ಒದಗಿಸಲಾಗುತ್ತಿದೆ.

Belagavi Trade Fair 2024 organised from December 26th

ಕಳೆದ ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಬೃಹತ್‌ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಾ ಬಂದಿದೆ. ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ.

150 ಮಳಿಗೆಗಳಿಗೆ ಅವಕಾಶ

ರಾಜ್ಯದ ಎಲ್ಲಾ ಜಿಲ್ಲೆಗಳ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸುತ್ತಿದ್ದಾರೆ. ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮಳಿಗೆ ಒಳಗೊಂಡಿದೆ.

ಈ ಮೇಳಕ್ಕೆ ಯಾವುದೇ ದರ ನಿಗದಿ ಮಾಡಿಲ್ಲ, ಉಚಿತ ಪ್ರವೇಶ ಇದೆ. ನಿತ್ಯ ಬೆಳಗ್ಗೆ 10.30ರಿಂದ ರಾತ್ರಿ 9.30 ರವರೆಗೆ ಪ್ರದರ್ಶನವಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರದರ್ಶನ ಕಣ್ಮನ ಸೆಳೆಯುವ ಪ್ರಖ್ಯಾತ ವಸ್ತುಗಳು

ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ಅಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್‌ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಇಲ್ಲಿ ದೊರೆಯಲಿವೆ.

ಅಕ್ಕ ಕೆಫೆ: ಬಗೆ ಬಗೆಯ ಆಹಾರ ಖಾದ್ಯಗಳು

ರಾಜ್ಯ ಸರ್ಕಾರವು 2024-25ನೇಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ಅಕ್ಕ ಕೆಫೆಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಈ ಉದ್ದೇಶದ ಭಾಗವಾಗಿ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ ಅನ್ನು "ಅಕ್ಕ-ಕೆಫೆ" ಶೀರ್ಷಿಕೆಯಡಿ ತೆರೆಯಲಾಗುತ್ತದೆ.

ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಗಿರ್ಮಿಟ್‌/ಮಂಡಕ್ಕಿ, ಮೆಣಸಿನಕಾಯಿ ಬಜ್ಜಿ, ಜೋಳದ ಖಡಕ್ ರೊಟ್ಟಿ, ಹೋಳಿಗೆ, ಮಂಗಳೂರ ನೀರ್‌ ದೋಸೆ ಮತ್ತು ಮಾಂಸಹಾರಿ ಆಹಾರಗಳು ಮೇಳದಲ್ಲಿ ಜನರನ್ನು ಆಕರ್ಷಿಸಲಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+