ಚಳಿಗಾಲ ಅಧಿವೇಶನ: ಡಿಸೆಂಬರ್ 1ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ ಜಾರಿ, ಎಲ್ಲಿವರೆಗೆ ಗೊತ್ತಾ?
ಬೆಳಗಾವಿ, ನವೆಂಬರ್, 30: ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲಿನ ಪ್ರದೇಶದಲ್ಲಿ ಡಿಸೆಂಬರ್ 1ರಿಂದ 30ರವರೆಗೆ 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸೌಧದ ಪೂರ್ವ ಕಡೆಗೆ ಶೆಗನಮಟ್ಟಿ ಜಮೀನ 500 ಮೀಟರ್ ಅಂತರ, ಉತ್ತರಕ್ಕೆ ಸುವರ್ಣ ಗಾರ್ಡನ್ ಕಲ್ಯಾಣ ಮಂಟಪದವರೆಗೆ 500 ಮೀಟರ್ ಹಾಗೂ ಪಶ್ಚಿಮಕ್ಕೆ ರಾಷ್ಟ್ರೀಯ ಹೆದ್ದಾರಿಯ ಆಚೆಗೆ ಇರುವ ಸಂಪೂರ್ಣ ಗಾರ್ಡನ್ ಹೊಟೇಲ್‍ದವರೆಗೆ 500 ಮೀಟರ್ ಅಂತರ ಮತ್ತು ದಕ್ಷಿಣ ದಿಕ್ಕಿನ ಕಡೆಗೆ ಟೊಯೊಟಾ ಶೋರೂಂವರೆಗೆ 500 ಮೀಟರ್ ಅಂತರದಲ್ಲಿ ಡಿಸೆಂಬರ್ 1ರಿಂದ 30ರವರೆಗೆ ಈ ನಿಷೇಧಾಜ್ಞೆ ಜಾರಿ ಇರಲಿದೆ.

5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ. ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಭಾಷಣ, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.
ಯಾವುದೇ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು. ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡುವುದು, ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ತಡೆಯೊಡ್ಡಿ ಹೆದ್ದಾರಿಯಲ್ಲಿ ಒಡಾಡುತ್ತಿರುವ ಅವಶ್ಯಕ ರೋಗಿಗಳನ್ನು ಸಾಗಿಸುವ ಆಂಬುಲೆನ್ಸ್ ಹಾಗೂ ಇತರ ಅವಶ್ಯಕ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ತಡೆದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications