ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಬಗ್ಗೆ ನಿರ್ಧಾರ

ಬೆಳಗಾವಿ, ಡಿಸೆಂಬರ್ 20: ಬೆಳಗಾವಿಯ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸುವ ಬಗ್ಗೆ ಇಂದು ಮಧ್ಯಾಹ್ನ ನಿರ್ಧಾರವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡು ಮುಂದಿನ ಬುಧವಾರದ ನಂತರ ಮಸೂದೆ ಮಂಡನೆ ಮಾಡುವ ಸಾಧ್ಯತೆ ಹೆಚ್ಚಿದೆ.

ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಅನುಮೋದನೆ ಸಾಧ್ಯತೆಯಿದ್ದು, ಪ್ರತಿಭಟನೆಗಳ ನಡುವೆ ವಿಧೇಯಕ ಕುರಿತ ಚರ್ಚೆಗೂ ಅನುವು ಮಾಡಿಕೊಡಬೇಕಿದೆ.

ಪ್ರಸ್ತಾವಿತ ಮಸೂದೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು, ಬುದ್ಧಿಮಾಂದ್ಯರು, ಅಪ್ರಾಪ್ತರು ಮತ್ತು ಹೆಂಗಸರನ್ನು ಬಲವಂತವಾಗಿ ಮತಾಂತರ ಮಾಡಿದರೆ ಕನಿಷ್ಠ ಮೂರು ವರ್ಷದಿಂದ ಹತ್ತು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ರೂ.50 ಸಾವಿರ ದಂಡ ವಿಧಿಸಲು ಪ್ರಸ್ತಾವನೆ ಮಾಡಲಾಗಿದೆ.

Belagavi Winter Session: Bommai Cabinet likely to table anti-conversion bill

ಮತಾಂತರಕ್ಕೂ ಎರಡು ತಿಂಗಳು ಮುನ್ನ ಮತಾಂತರಗೊಳ್ಳುವ ವ್ಯಕ್ತಿಯು ಈ ಕುರಿತು ನೋಟಿಸ್‌ ಅನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವರಿಗೆ ನೀಡಬೇಕಾಗುತ್ತದೆ. ಅದೇ ರೀತಿ, ಮತಾಂತರ ಮಾಡುವ ವ್ಯಕ್ತಿಯೂ ಸಹ ಈ ಬಗ್ಗೆ ಒಂದು ತಿಂಗಳಿಗೂ ಮುನ್ನ ಮ್ಯಾಜಿಸ್ಟ್ರೇಟ್‌ ಅವರಿಗೆ ನೋಟಿಸ್‌ ನೀಡಬೇಕಾಗುತ್ತದೆ.

ಮತಾಂತರಗೊಂಡ ನಂತರ ವ್ಯಕ್ತಿಯು ಒಂದು ತಿಂಗಳ ಒಳಗೆ ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವರಿಗೆ ಮಾಹಿತಿಯನ್ನು ನೀಡಬೇಕು. ತಪ್ಪಿದಲ್ಲಿ ಮತಾಂತರಗೊಂಡವರು ಹಾಗೂ ಮತಾಂತರ ಮಾಡಿದವರು ಇಬ್ಬರೂ ಜೈಲು ಸೇರಬೇಕಾಗುತ್ತದೆ.

ಸರ್ಕಾರಿ ಸವಲತ್ತು ಬಂದ್?:
ಮತಾಂತರಗೊಂಡ ನಂತರ ಒಂದೊಮ್ಮೆ ಆ ವ್ಯಕ್ತಿ ಮೀಸಲಾತಿ ವ್ಯಾಪ್ತಿಗೆ ಒಳಪಡುವ ಜಾತಿ, ಧರ್ಮಗಳಿಗೆ ಸೇರಿದ್ದರೆ ಅವರಿಗೆ ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಮುಂತಾದವುಗಳಿಂದ ದೊರೆಯುವ ಸವಲತ್ತುಗಳನ್ನು ನಿಲ್ಲಿಸಲಾಗುತ್ತದೆ ಎಂಬ ಸುದ್ದಿಯಿದೆ.

ಉತ್ತರ ಪ್ರದೇಶ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಮತಾಂತರ ಕಾಯಿದೆಗಳನ್ನು ಜಾರಿಗೆ ತಂದಿದ್ದು ರಾಜ್ಯ ಸರ್ಕಾರವು ಮಂಡಿಸಲು ಉದ್ದೇಶಿಸಿರುವ ಮಸೂದೆಯೂ ಆ ರಾಜ್ಯಗಳ ಕಾನೂನಿನ ನಕಲು ಎಂದು ಹೇಳಲಾಗುತ್ತಿದೆ.

Belagavi Winter Session: Bommai Cabinet likely to table anti-conversion bill

ಉತ್ತರ ಪ್ರದೇಶ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ ಸೇರಿ 8 ವಿವಿಧ ರಾಜ್ಯಗಳಲ್ಲಿನ ಮತಾಂತರ ನಿಷೇಧ ಕಾಯ್ದೆಯನ್ನು ತರಿಸಿ ಶಾಸನ ರಚನೆ ಇಲಾಖೆ ಪರಿಶೀಲನೆ ನಡೆಸಿದೆ. ಕಾನೂನು ಇಲಾಖೆಯೂ ಇತರೆ ರಾಜ್ಯಗಳ ಕಾಯ್ದೆಯಲ್ಲಿನ ಕಾನೂನಾತ್ಮಕ ಅಂಶಗಳ ಬಗ್ಗೆ ಪರಿಗಣಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ ಅವರು ಕರಡು ಪ್ರತಿಯನ್ನು ಪರಿಶೀಲಿಸಿದ್ದಾರೆ.

ಮತಾಂತರ ಮಸೂದೆ ಕಾಯ್ದೆ ಜಾರಿಗೆ ಕ್ರೈಸ್ತ ಸಮುದಾಯದವರು ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆ, ವಿವಿಧ ಮಠಾಧೀಶರು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಂತೆ ಪಟ್ಟು ಹಿಡಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ತುಳಸಿ ಮುನಿರಾಜುಗೌಡ ಅವರು ಮತಾಂತರ ನಿಷೇಧದ ಖಾಸಗಿ ವಿಧೇಯಕವನ್ನು ಮಂಡಿಸಲು ಸಭಾಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಎಂಇಎಸ್ ಪುಂಡಾಟ, ಉತ್ತರ ಕರ್ನಾಟಕಕ್ಕೆ ಸಿಗಬೇಕಿರುವ ಅನುದಾನ, ಬಿಟ್‌ ಕಾಯಿನ್ ಹಗರಣ, ಸಚಿವರ ಅಕ್ರಮ ಆಸ್ತಿ ಪ್ರಕರಣದ ಹಗರಣ, ರಮೇಶ್‌ ಜಾರಕಿಹೊಳಿ ಸಿ ಡಿ ಹಗರಣದ ಬಗ್ಗೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಲು ವಿರೋಧ ಪಕ್ಷ ಕಾಂಗ್ರೆಸ್‌ ಮುಂದಾಗಿದೆ. ಇದೆಲ್ಲದರ ನಡುವೆ ಮತಾಂತರ ನಿಷೇಧ ಕಾಯಿದೆ ಬಗ್ಗೆ ಹೆಚ್ಚಿನ ಚರ್ಚೆ, ವಿರೋಧ, ಪ್ರತಿಭಟನೆಗಳ ನಿರೀಕ್ಷೆಯಿದೆ.

Recommended Video

      ಕೊಹ್ಲಿ-ದ್ರಾವಿಡ್ ಇಬ್ಬರ ಮಧ್ಯೆ ಫುಟ್​ವಾಲಿ ಫೈಟ್ ಸಖತ್ ವೈರಲ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+