ನಿಧಿಗಾಗಿ ಮಗು ಬಲಿಕೊಡಲು ಯತ್ನ, ಮಹಿಳೆ ಬಂಧನ
ಬೆಳಗಾವಿ, ಸೆಪ್ಟೆಂಬರ್ 19 : ನಿಧಿ ಆಸೆಗಾಗಿ 14 ತಿಂಗಳ ಹೆಣ್ಣು ಮಗುವನ್ನು ಬಲಿ ಕೊಡಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಬಲಿ ಕೊಡಲು ಹೊರಟಿದ್ದ ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಶೀರಿನಾ ಜಮಾದಾರ್ ಎಂಬ ಮಹಿಳೆ ಮಹಾಲಯ ಅಮಾವಾಸ್ಯೆಯ ದಿನವಾದ ಇಂದು ಮಗುವನ್ನು ಬಲಿ ಕೊಡಲು ಪ್ರಯತ್ನ ನಡೆಸಿದ್ದಳು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶೀರಿನಾ ಮನೆಯ ಮಾಲೀಕನ ಮಗಳನ್ನು ಬಲಿಕೊಡಲು ಮುಂದಾಗಿದ್ದಳು.

ಮನೆಯಲ್ಲಿ ಮಗುವನ್ನು ಬಲಿಕೊಡಲು ಸಿದ್ಧತೆ ಮಾಡಲಾಗಿತ್ತು. ಮನೆಯ ವೊಳಗೆ 8 ಅಡಿ ಉದ್ದದ ಗುಂಡಿ ತೋಡಲಾಗಿತ್ತು. ಗುಂಡಿಯಲ್ಲಿ ಮಗುವನ್ನು ಇಡಲು ಹೋದಾಗ ಅದು ಚೀರಿಕೊಂಡಿದೆ. ಆಗ ಸ್ಥಳೀಯರು ಬಂದು ಗಮನಿಸಿದಾಗ ಶೀರಿನಾ ಕೃತ್ಯ ಬಯಲಾಗಿದೆ.
ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿ, ಶಿರೀನಾಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶೀರಿನಾಗೆ ನಿಧಿ ತೆಗೆದಯಲು ಸಹಕಾರ ನೀಡುತ್ತಿದ್ದ ಮುಸಾಬಿ ಮುಲ್ಲಾ, ಜಾವೇದ ಮುಲ್ಲಾ, ಫಾರೂಕ್ ಮುಲ್ಲಾ ಮತ್ತು ಸೋನಾ ಎಂಬುವವರು ಪರಾರಿಯಾಗಿದ್ದಾರೆ.
ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಶೀರಿನಾ ಬಂಧಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಇನ್ನೂ ನಾಲ್ವರು ಮಕ್ಕಳನ್ನು ಬಲಿಕೊಡಲು ಆರೋಪಿಗಳು ಸಂಚು ರೂಪಿಸಿದ್ದರು ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.
-
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications