ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಗುತ್ತಿಗೆ ನೌಕರ ಆತ್ಮಹತ್ಯೆಗೆ ಯತ್ನ

ಬೆಳಗಾವಿ, ಜುಲೈ.03: ಸಂಬಳ ನೀಡದ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಳೆದ ಒಂಬತ್ತು ತಿಂಗಳಿಂದ ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ಸಂಬಳ ನೀಡದೆ ಸತಾಯಿಸುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿಯೇ ಸಿಬ್ಬಂದಿ ವಿಷಸೇವಿಸಿದ್ದಾರೆ.

ರಾಕೇಶ್ ಶಿವಪ್ಪ ಕಾಂಬಳೆ ಆತ್ನಹತ್ಯೆಗೆ ಯತ್ನಿಸಿದ ವ್ಯಕ್ತಿ. ಕಳೆದ ಒಂದೂವರೆ ವರ್ಷದಿಂದ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ರಾಕೇಶ್ ಕೆಲಸ ಮಾಡುತ್ತಿದ್ದಾರೆ.

ಅಧಿಕಾರಿಗಳು ಸಂಬಳ ಕೊಡದೆ ಸತಾಯಿಸುತ್ತಿರುವುದಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Belgaum district hospital staff tried to commit suicide

ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭೂ ವ್ಯವಹಾರ ಸಂಬಂಧ ಪರಿಚಿತ ರಿಯಲ್ ಎಸ್ಟೇಟ್ ಉದ್ಯಮಿ ಲಕ್ಷಾಂತರ ಹಣ ನೀಡದೆ ವಂಚಿಸಿದ್ದಾರೆಂದು ಆರೋಪಿಸಿ ಗೌರಿಬಿದನೂರು ತಾಲೂಕಿನ ರಿಯಲ್ ಎಸ್ಟೇಟ್ ಏಜೆಂಟ್ ಗಂಗಾಧರ್ ಎಂಬುವವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ್ದರು.

ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಗಂಗಾಧರ್ ಅವರನ್ನು ರಕ್ಷಣೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+