ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ: ಮುಚ್ಚಂಡಿ ಗ್ರಾಮ ಪಂಚಾಯಿತಿಯಲ್ಲಿ ಭಾರೀ ಗೋಲ್ ಮಾಲ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಅಕ್ಟೋಬರ್ 10: ಬೆಳಗಾವಿಯ ಮುಚ್ಚಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಭಾರೀ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.

ಏ. 1ರಿಂದ ನರೇಗಾ ಕೂಲಿ ಕಾರ್ಮಿಕರಿಗೂ ಆಧಾರ್ ಕಡ್ಡಾಯಏ. 1ರಿಂದ ನರೇಗಾ ಕೂಲಿ ಕಾರ್ಮಿಕರಿಗೂ ಆಧಾರ್ ಕಡ್ಡಾಯ

ನರೇಗಾ ಯೋಜನೆಯಡಿಯಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ ಮಕ್ಕಳು, ನಿವೃತ್ತ ಸರ್ಕಾರಿ ನೌಕರರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವೃದ್ಧಿರ ಹೆಸರಿನಲ್ಲಿ ಕೂಲಿ ಪಡೆದಿರುವುದು ಬಹಿರಂಗಗೊಂಡಿದೆ.

Belgavai: A scam worth more than Rs 40 lakh came to light in MNAREGA Scheme

ಬರಗಾಲದಿಂದ ತತ್ತರಿಸಿರುವ ಗ್ರಾಮಗಳಲ್ಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಬದಲು ಪ್ರಭಾವಿಗಳ ಒತ್ತಡಕ್ಕೆ ಮಣಿದು ಸುಳ್ಳು ದಾಖಲೆ ನೀಡಿ ಸುಮಾರು 40 ಲಕ್ಷಕ್ಕೂ ಅಧಿಕ ಹಣವನ್ನ ದುರುಪಯೋಗ ಪಡಿಸಿಳ್ಳಲಾಗಿದೆ.

ಅಲ್ಲದೇ ಮೃತಪಟ್ಟವರ ಹೆಸರಿನಲ್ಲಿಯೂ ಜಾಬ್ ಕಾರ್ಡ್ ರಚಿಸಿ 40 ಸಾವಿರಕ್ಕೂ ಅಧಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ನೌಕರರು, ನಿವೃತ್ತ ಅಂಚೆ ಇಲಾಖೆ ನೌಕರರು, ಶಾಲಾ ಮಕ್ಕಳು ಹಾಗೂ ಮರಣ ಹೊಂದಿದವರು ಸೇರಿ ಒಟ್ಟು 27 ಜನರ ಹೆಸರಲ್ಲಿ ಕೂಲಿ ಪಾವತಿ ಮಾಡಿರುವುದು ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಬೆಳಕಿಗೆ ಬಂದಿದೆ.

ಸ್ಥಳಿಯ ಶಾಸಕರ ಪ್ರಭಾವ ಬಳಸಿಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಸೇರಿಕೊಂಡು ಕೋಟ್ಯಾಂತರ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದಾರೆ.

ವಸತಿ ಯೋಜನೆಯಡಿ ಮನೆಗಳ ವಿತರಣೆಯಲ್ಲಿಯೂ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

English summary
A scam worth more than Rs 40 lakh came to light in Mahatma Gandhi National Rural Employment Guarantee (MNAREGA) Scheme in Muchandi Gram Panchayat Belagavi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X