ಪಾಠ ಮಾಡು 'ಗುರು'ವೇ ಅಂದ್ರೆ ಇಂತ ನೀಚ ಕೆಲಸ ಮಾಡೋದಾ?
ಮಕ್ಕಳಿಗೆ ಪಾಠ ಹೇಳಿ ಒಳ್ಳೆಯ ಭವಿಷ್ಯ ರೂಪಿಸಬೇಕಾದ ಶಿಕ್ಷಕನೊಬ್ಬ ಮಾಡಬಾರದ ಕೆಲಸ ಮಾಡಿ ಪೊಲೀಸರು ಅತಿಥಿಯಾಗಿದ್ದಾನೆ. ಸಮಾಜದಲ್ಲಿ ನಡೆಯುವ ಶೋಷಣೆಯ ವಿರುದ್ಧ ಹೋರಾಡಲು ವಿದ್ಯಾರ್ಥಿನಿಯರಿಗೆ ಈತ ಧೈರ್ಯ ತುಂಬ ಬೇಕಾದ ಸ್ಥಾನದಲ್ಲಿದ್ದವನು. ಆದರೆ, ಈತನೇ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿರುವ ನೀಚ ಕೃತ್ಯ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದ ಎಂದು ಗಂಭೀರವಾಗಿ ಆರೋಪಿಸಲಾಗಿದೆ. ಶಾಲೆಯಲ್ಲಿದ್ದ ವಿದ್ಯಾರ್ಥಿನಿಯರೊಂದಿಗೆ ಈತ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ ಎನ್ನುವ ಆರೋಪದ ಮೇರೆಗೆ ಪೊಲೀಸರು ಈತನನ್ನು ಬಂಧಿಸಿದ್ದಾರೆ.

ಈತ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ. ವಿದ್ಯಾರ್ಥಿಗಳನ್ನು ಕರೆದು ಶೌಚಾಲಯಕ್ಕೆ ಹೋಗುವಾಗ ತಮ್ಮ ಖಾಸಗಿ ಅಂಗಾಂಗಗಳ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಇದೇ ರೀತಿ ತನ್ನ ಕಾಮದಾಹಕ್ಕೆ ತನ್ನ ಮೊಬೈಲ್ನಲ್ಲಿ ಕೆಲ ಅಶ್ಲೀಲ ಫೋಟೋಗಳನ್ನು ಸೇವ್ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈತ ಶಾಲೆಯಲ್ಲಿ ಪಾಠ ಮಾಡುವ ಬದಲಿಗೆ ಕಾಮುಕನಾಗಿ ವಿಕೃತಿ ಮೆರೆಯುತ್ತಿದ್ದ. ಕಳೆದ ಒಂದು ವರ್ಷದಿಂದಲೂ ಶಿಕ್ಷಕ ಈ ನೀಚ ಕೆಲಸ ಮಾಡುತ್ತಿದ್ದ. ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಈತ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಶಿಕ್ಷಕನ ಈ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿನಿಯೊಬ್ಬರು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಇದಾದ ನಂತರ ಶಿಕ್ಷಕನ ಮುಖವಾಡ ಕಳಚಿದೆ.

ಬಳಿಕ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಆರೋಪಿ ಶಿಕ್ಷಕ ಮೊಹಮ್ಮದ್ ಸಾದಿಕ್ ವಿರುದ್ಧ ಚಿಕ್ಕೋಡಿ ಪೊಲೀಸ್ ಸ್ಟೇಷನ್‌ನಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಇನ್ನು ಈತನ ಮೊಬೈಲ್ ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ಸಂಗತಿ ಬಹಿರಂಗವಾಗಿದ್ದು, ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಇದ್ದವು. ಇದರ ಜೊತೆಗೆ ಕೆಲ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಸಹ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮೂಲದವನಾದ ಈತ ಕಳೆದ ಐದು ವರ್ಷಗಳಿಂದ ಚಿಕ್ಕೋಡಿ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ.
ಇನ್ನು ಈ ಕೇಸ್ ಸಂಬಂಧ ಮಾತನಾಡಿರುವ ಬೆಳಗಾವಿ ಎಸ್‌ಪಿ ಭೀಮಾಶಂಕರ್ ಗುಳೇದ್, ಶಿಕ್ಷಕ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟುತ್ತಿದ್ದ. ವಿದ್ಯಾರ್ಥಿನಿಯರು ಟಾಯ್ಲೆಟ್‌ಗೆ ಹೋಗುವಾಗ ಖಾಸಗಿ ಅಂಗಾಂಗಗಳ ಫೋಟೊ ಕ್ಲಿಕ್ಕಿಸುವಂತೆ ಪೀಡಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಈಗಾಗಲೇ ಆರೋಪಿಯ ಮೊಬೈಲ್ ಕೂಡ ವಶಕ್ಕೆ ಪಡೆದಿದ್ದೇವೆ. ಆತನ ಮೊಬೈಲ್ನಲ್ಲಿ ಇನ್ನೂ ಕೆಲವು ಫೋಟೋಗಳು ಇದ್ದ ಬಗ್ಗೆ ತಿಳಿದುಬಂದಿದ್ದು, ಕೆಲವು ಡಿಲೀಟ್ ಕೂಡ ಆಗಿವೆ. ಹಾಗಾಗಿ ಇದನ್ನು ಎಫ್ಎಸ್ಎಲ್ಗೆ ಕಳಿಸುತ್ತೇವೆ. ಇನ್ನು ಈತನ ಬಗ್ಗೆ ಅನೇಕ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದು, ಇದನ್ನು ಆಧರಿಸಿ ಪೋಕ್ಸೋ ಕೇಸ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದಿದ್ದಾರೆ.
ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಚಿಕ್ಕೋಡಿ ಡಿಡಿಪಿಐ ಬಿ.ಎ.ಮೇಕನಮರಡಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕನ ಈ ಕಾಮುಕ ಮುಖವಾಡ ಕಂಡು ಪೋಷಕರು ಬೆಚ್ಚಿಬಿದ್ದಿದ್ದಾರೆ.












Click it and Unblock the Notifications