ಭಾರತ ಬಂದ್: ವಿವಿಧ ಸಂಘಟನೆಗಳಿಂದ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ, ಡಿಸೆಂಬರ್ 8: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ.೮ ರಂದು ದೇಶದಾದ್ಯಂತ ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

ರೈತರು ಕರೆ ನೀಡಿರುವ ಭಾರತ ಬಂದ್‌ಗೆ ರಾಜ್ಯದಲ್ಲಿ ಕೂಡ ಬೆಂಬಲ ವ್ಯಕ್ತವಾಗಿದೆ. ಕೃಷಿ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಗಡಿನಾಡು ಬೆಳಗಾವಿಯಲ್ಲೂ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿ ಬಸ್ ನಿಲ್ದಾಣ ಎದುರು ಟಯರ್‌ಗೆ ಬೆಂಕಿ ಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ದಿಂದ ಪ್ರತಿಭಟನೆ ನಡೆಸಲಾಯಿತು.

Bharat Bandh: Protest In Belagavi By Various Organizations

ರೈತ ವಿರೋಧಿ ಕೃಷಿ ಮಸೂದೆ ವಾಪಸ್ ಪಡೆಯುವಂತೆ ಇದೇ ವೇಳೆ ಒತ್ತಾಯಿಸಿದ ಹೋರಾಟಗಾರರು, ಬಸ್‌ಗಳ ಸಂಚಾರ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು

ಬಸ್ ನಿಲ್ದಾಣದ ಎದುರು ಬಸ್ ತಡೆದು ಪ್ರತಿಭಟನೆ ನಡೆಸಿದ್ದರಿಂದಾಗಿ, ವಿವಿಧ ಕಡೆ ತೆರಳಲು ಆಗಮಿಸಿದ ಪ್ರಯಾಣಿಕರು ಪರದಾಡುವಂತಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣವಿದ್ದು, ಬಸ್ ಗಳು ಪ್ರಯಾಣಕ್ಕೆ ಸಿದ್ಧವಾಗಿ ನಿಂತಿವೆ. ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಆಗಮಿಸಿದ್ದು, ಪ್ರಯಾಣಿಕರು ನಿಂತಲ್ಲೇ ಪ್ರತಿಭಟನೆ ನೋಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+