Accident News: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದಿದೆ.
ಸಾವನ್ನಪ್ಪಿವದರು ಶಿವಕುಮಾರ್, ರತಿಕಾಂತ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳಾಗಿದ್ದಾರೆ. ಓರ್ವನಿಗೆ ಗಂಭೀರ ಗಾಯ ಆಗಿದ್ದು, ಅವರನ್ನು ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. ದರ್ಶನ ಮುಗಿಸಿ ವಾಪಾಸ್ ಆಗುವ ವೇಳೆ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳು ಡಿಕ್ಕಿ ಹೊಡೆದುಕೊಂಡಿವೆ. ಇಂದು ಬೆಳಗಿನ ಜಾವ ದುರಂತ ಸಂಭವಿಸಿದ್ದು, ಐವರು ಸ್ನೇಹಿತರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಬ್ಬರು ಸಾವು: ಇನ್ನೋವಾ ಕಾರು-ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಹಾಸನಾಂಬ ದೇವಿಯ ದರ್ಶನ ಪಡೆದು ಹೋಗುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಎಂಬುವವರು ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾ ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ.
ಇನ್ನೂ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿ ಛಾಯಾ ಎಂಬುವವರ ಸ್ಥಿತಿ ಗಂಭೀರವಾಗಿದೆ. ಇವರಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ: ನ್ನೋವಾ ಕಾರು ಹಾಗೂ ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇತ್ತೀಚೆಗಷ್ಟೇ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿತ್ತು.
ಇನ್ನೋವಾ ಕಾರು ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ನಡೆದಿದೆ. ಇನ್ನೋವಾ ಕಾರು ಹಾಗೂ ಟಂಟಂ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಎಂಬುವವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಎಂಬುವರು ಗಾಯಾಳುಗಳಾಗಿದ್ದು, ಇವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಮತ್ತು ಗಾಯಾಳುಗಳು ನವನಗರದ 45ನೇ ಸೆಕ್ಟರ್ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನೆ ಸ್ಥಳಕ್ಕೆ ಆಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications