ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಉಪ ಚುನಾವಣೆ; ಮಂಗಲ ಸುರೇಶ್ ಅಂಗಡಿ ನಾಮಪತ್ರ ಸಲ್ಲಿಕೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮಾರ್ಚ್ 30; ಬೆಳಗಾವಿ ಲೋಕಸಭೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ನಾಮಪತ್ರವನ್ನು ಸಲ್ಲಿಸಿದರು. ಏಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಮಂಗಳವಾರ ಮಂಗಲ ಸುರೇಶ್ ಅಂಗಡಿ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.

ಬೆಳಗಾವಿ ಉಪ ಚುನಾವಣೆ; ಕಾಂಗ್ರೆಸ್ ಗೆಲುವಿಗೆ 60 ನಾಯಕರ ತಂಡ! ಬೆಳಗಾವಿ ಉಪ ಚುನಾವಣೆ; ಕಾಂಗ್ರೆಸ್ ಗೆಲುವಿಗೆ 60 ನಾಯಕರ ತಂಡ!

ಮಂಗಲ ಸುರೇಶ್ ಅಂಗಡಿ ಅವರಿಂದ ನಾಮಪತ್ರವನ್ನು ಚುನಾವಣಾಧಿಕಾರಿ ಡಾ. ಹರೀಶ ಕುಮಾರ್ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಈಶ್ವರಪ್ಪ ಮುಂತಾದವರು ಇದ್ದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಬೆಳಗಾವಿ ಲೋಕಸಭಾ ಉಪ ಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

BJP Candidate Mangal Suresh Angadi Files Nomination

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳ ಜೊತೆ ಯಡಿಯೂರಪ್ಪ ಮಾತನಾಡಿದರು. "ಸಿಡಿ ಪ್ರಕರಣ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ ಮಾಡಿಸುತ್ತಿದ್ದಾರೆ. ರಮೇಶ ಜಾರಕಿಹೊಳಿ ಮೇಲೆ ಅನಗತ್ಯವಾದ ಆರೋಪ ಮಾಡುತ್ತಿದ್ದಾರೆ ಎಂಬುದು ಮನೆ ಮಾತಾಗಿದೆ. ಇದು ಕೇವಲ ದುರುದ್ದೇಶ ಪೂರ್ವಕ ಆರೋಪ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ" ಎಂದರು.

ಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆಳಗಾವಿ ಲೋಕಸಭೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

"ಕಾನೂನು ಚೌಕಟ್ಟಿನಲ್ಲಿ ಎಲ್ಲವನ್ನು ಎದುರಿಸಲು ಸಿದ್ದರಾಗಿದ್ದೇವೆ. ಚುನಾವಣಾ ಪ್ರಚಾರದಲ್ಲಿ ರಮೇಶ ಜಾರಕಿಹೊಳಿ ಬಂದು ಭಾಗವಹಿಸಬೇಕು" ಎಂದು ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 17ರಂದು ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ.

English summary
BJP candidate for Belagavi loksabha by election campaign Mangal Suresh Angadi filed nomination on March 30, 2021. By election will be held on April 17, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X