ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರದ ನಿರ್ಲಕ್ಷ್ಯದಿಂದ ಈಗ ಜನರಿಗೆ ಸಮಸ್ಯೆ: ಸತೀಶ್ ಜಾರಕಿಹೊಳಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 23: ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹರಡುವ ಬಗ್ಗೆ ತಜ್ಞರು ಮೊದಲೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ ಜನರಿಗೆ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಲಸಿಕೆ ಅಪ್ಡೇಟ್: ಬೆಲೆ, ನೋಂದಣಿ ಸಂಪೂರ್ಣ FAQs ಕೊರೊನಾ ಲಸಿಕೆ ಅಪ್ಡೇಟ್: ಬೆಲೆ, ನೋಂದಣಿ ಸಂಪೂರ್ಣ FAQs

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ. ಮೊದಲೇ ನೈಟ್ ಕರ್ಪ್ಯೂ ಜೊತೆಗೆ, ಹಗಲು ಹೊತ್ತಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರೇ ಕೊರೊನಾ ನಿಯಂತ್ರಣಕ್ಕೆ ಬರುತ್ತಿತ್ತು. ಕೆಲವು ಕಡೆ ಈಗ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ ಎಂದು ಹೇಳಿದರು.

 ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿ:

ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿ:

ಬೆಂಗಳೂರು ಸೇರಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಇಲ್ಲಿ ಅಧಿಕಾರಿಗಳು ಹಾಗೂ ಜನರು ಸಾಕಷ್ಟು ಎಚ್ಚರ ವಹಿಸುತ್ತಿದ್ದಾರೆ. ಆದರೂ ಕೂಡ ಇನ್ನು ಹೆಚ್ಚು ಸುರಕ್ಷತೆ ವಹಿಸಬೇಕಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನರನ್ನು ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿ, ಅವರ ಮಾಹಿತಿ ಪಡೆದು ಒಳಬಿಡಬೇಕು. ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.

 ತರಕಾರಿ ಮಾರುಕಟ್ಟೆ ಸ್ಥಳಾಂತರ ಬಗ್ಗೆ ಪರಿಶೀಲಿಸುವೆ:

ತರಕಾರಿ ಮಾರುಕಟ್ಟೆ ಸ್ಥಳಾಂತರ ಬಗ್ಗೆ ಪರಿಶೀಲಿಸುವೆ:

ಜನಸಂಧಣಿ ತಪ್ಪಿಸುವ ನಿಟ್ಟಿನಲ್ಲಿ ಎಪಿಎಂಸಿಯ ತರಕಾರಿ ಮಾರುಕಟ್ಟೆಯನ್ನು ಬೇರೆ ಕಡೆಯೂ ಸ್ಥಳಾಂತರ ಮಾಡುವ ಕುರಿತು ಖುದ್ದಾಗಿ ಪರಿಶೀಲಿಸಿ, ಕ್ರಮಕೈಗೊಳ್ಳಲು ಸೂಚಿಸುವೆ. ನಗರದ ಎರಡು, ಮೂರು ಕಡೆ ಎಪಿಎಂಸಿಯ ಜಾಗಗಳು ಇವೆ. ಈ ಜಾಗಗಳಿಗೆ ತರಕಾರಿ ಮಾರುಕಟ್ಟೆಗಳನ್ನು ಸ್ಥಳಾಂತರಿಸಿ, ಜನರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಲಾಕ್‌ಡೌನ್ ಬೇಡ ಎಂದ ಸತೀಶ್ ಜಾರಕಿಹೊಳಿಯಾವುದೇ ಕಾರಣಕ್ಕೂ ಲಾಕ್‌ಡೌನ್ ಬೇಡ ಎಂದ ಸತೀಶ್ ಜಾರಕಿಹೊಳಿ

 ಚುನಾವಣಾ ಪ್ರಚಾರಕ್ಕೆ ನಿರ್ಬಂಧ ಹೇರುವಂತೆ ತಿಳಿಸಿದ್ದೆ:

ಚುನಾವಣಾ ಪ್ರಚಾರಕ್ಕೆ ನಿರ್ಬಂಧ ಹೇರುವಂತೆ ತಿಳಿಸಿದ್ದೆ:

ಉಪಚುನಾವಣಾ ಪ್ರಚಾರದ ಸಂದರ್ಭದಲ್ಲೂ ನಿರ್ಬಂಧ ಹೇರುವಂತೆ ನಾವು ಸಲಹೆ ನೀಡಿದ್ದೆವು. ಆದರೆ, ತಮ್ಮ ರಾಜಕೀಯಕ್ಕಾಗಿ ಸರ್ಕಾರ ಚುನಾವಣೆ ಮೇಲೆ ನಿರ್ಬಂಧ ಹೇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದರೂ, ಬಳ್ಳಾರಿ ಪಾಲಿಕೆ ಚುನಾವಣೆಯಲ್ಲಿ ಸಚಿವ ಶ್ರೀರಾಮುಲು ಅವರು ಬೃಹತ್ ಪ್ರಚಾರ ನಡೆಸುತ್ತಿರುವುದು ಸರಿಯಲ್ಲ. ಈ ಬಗ್ಗೆ ಸಚಿವರು ಎಚ್ಚರ ವಹಿಸಬೇಕು. ಸರ್ಕಾರದವರು ಕೂಡ ಇವರಿಗೆ ಬುದ್ದಿಮಾತು ಹೇಳಬೇಕು" ಎಂದು ಹೇಳಿದರು.

 ಸರ್ಕಾರ ವ್ಯವಸ್ಥಿತ ತೀರ್ಮಾನ ಕೈಗೊಳ್ಳುತ್ತಿಲ್ಲ:

ಸರ್ಕಾರ ವ್ಯವಸ್ಥಿತ ತೀರ್ಮಾನ ಕೈಗೊಳ್ಳುತ್ತಿಲ್ಲ:

ನಿನ್ನೆ ಅಂಡಗಿ, ಮುಂಗಟ್ಟುಗಳನ್ನು ದಿಢೀರನೆ ಬಂದ್ ಮಾಡಿಸಿರುವುದು ಸರಿಯಲ್ಲ. ಮೊದಲೇ ತಿಳಿಸಿದ್ದರೇ ವ್ಯಾಪಾರಿಗಳೇ ಸಹಕಾರ ನೀಡುತ್ತಿದ್ದರು. ದಿಢೀರನೆ ಬಂದ್ ಮಾಡಿಸಿರುವುದು ಪಕ್ಷದ ನಿರ್ಧಾರವಾಗಿದೆ. ತಜ್ಞರ ಸಲಹೇ ಪಡೆಯದೇ, ಪಕ್ಷದಿಂದ ನಿರ್ಧಾರ ಕೈಗೊಂಡರೇ ಈ ರೀತಿಯಾಗುತ್ತದೆ. ಸರ್ಕಾರ ವ್ಯವಸ್ಥಿತವಾಗಿ ತೀರ್ಮಾನ ಕೈಗೊಳ್ಳುತ್ತಿಲ್ಲ. ಇದನ್ನು ಪಕ್ಷಾತೀತವಾಗಿ ಎಲ್ಲರೂ ವಿರೋಧಿಸಲೇಬೇಕು ಎಂದರು.

English summary
KPCC working president Satish Jarkiholi alleged that Karnataka government has no plan and intend to tackle COVID 19 crisis in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X