ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ರಾಜ್ಯದಲ್ಲಿ ಕೇಳಿ ಬಂತು "ಪರ್ಸಂಟೇಜ್ ಸರ್ಕಾರ" ಎಂಬ ಮಾತು!

|
Google Oneindia Kannada News

ಬೆಳಗಾವಿ, ಅಕ್ಟೋಬರ್ 19 : "ಪರ್ಸಂಟೇಜ್ ಸರ್ಕಾರ" 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಸಿದ್ದರಾಮಯ್ಯ ಸರ್ಕಾರವನ್ನು ಬಣ್ಣಿಸಿದ್ದು ಹೀಗೆ. ಈಗ ಇದೇ ಮಾತನ್ನು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಡಿದ್ದಾರೆ.

ಸೋಮವಾರ ಬಾದಾಮಿ ಪ್ರವಾಸ ಕೈಗೊಂಡಿರುವ ಪ್ರತಿಪಕ್ಷ ನಾಯಕ, ಬಾದಾಮಿ ಶಾಸಕ ಸಿದ್ದರಾಮಯ್ಯ ಬೆಳಗಾವಿಗೆ ವಿಮಾನದ ಮೂಲಕ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ ಇಲ್ಲಿ ನಯಾಪೈಸೆ ಬಿಡುಗಡೆಯಾಗಲ್ಲ" ಎಂದು ಆರೋಪಿಸಿದರು.

ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

"ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೊಸ ಅನುದಾನವಂತೂ ಇಲ್ಲ, ಇದರ ಜೊತೆಗೆ ಹಿಂದೆ ಘೋಷಿಸಿದ್ದ ಅನುದಾನವನ್ನೂ ತಡೆಹಿಡಿಯಲಾಗಿದೆ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿತ್ರಗಳು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಚಿತ್ರಗಳು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

"ಕಳೆದ ವರ್ಷದ ಆಗಸ್ಟ್‌ನಲ್ಲಿ ಮತ್ತು ಈ ಬಾರಿಯ ಆಗಸ್ಟ್‌ನಲ್ಲಿ, ಮತ್ತೆ ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಪ್ರವಾಹ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಒಮ್ಮೆಯಾದರೂ ರಾಜ್ಯಕ್ಕೆ ಭೇಟಿ ನೀಡಿ ಜನರ ಕಷ್ಟ ಕೇಳಿದ್ದಾರಾ?. ಬಿಜೆಪಿಯ 25 ಸಂಸದರನ್ನು ರಾಜ್ಯದಿಂದ ಆರಿಸಿ ಕಳಿಸಿರುವುದೇ ಮೋದಿ ಅವರು ಕರ್ನಾಟಕವನ್ನು ಇಷ್ಟು ತಾತ್ಸಾರ ಮಾಡಲು ಕಾರಣ" ಎಂದು ಸಿದ್ದರಾಮಯ್ಯ ಹೇಳಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

ವೈಮಾನಿಕ ಸಮೀಕ್ಷೆ ಏಕೆ?

ವೈಮಾನಿಕ ಸಮೀಕ್ಷೆ ಏಕೆ?

"ಪ್ರವಾಹ ಪರಿಸ್ಥಿತಿ ಇರುವಾಗ ವೈಮಾನಿಕ ಸಮೀಕ್ಷೆ ಮಾಡುವುದು ಸರಿ. ಆದರೆ, ಈಗ ಪ್ರವಾಹ ಪೀಡಿತ ಸ್ಥಳಗಳಿಗೆ ರಸ್ತೆ ಮೂಲಕ ಸಂಚರಿಸಲು, ನಿರಾಶ್ರಿತ ಕೇಂದ್ರಗಳಲ್ಲಿರುವ ಜನರನ್ನು ಭೇಟಿ ಮಾಡಲು ಅವಕಾಶವಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಮಾನದಲ್ಲೇ ಸಮೀಕ್ಷೆ ಮಾಡಿದರೆ ಜನರ ಕಷ್ಟ ಏನು ಅಂತ ಹೇಗೆ ತಿಳಿಯುತ್ತೆ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನಳಿನ್ ಕುಮಾರ್ ಕಟೀಲ್

ನಳಿನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, "ತಾನಿರುವ ಹುದ್ದೆಯ ಗೌರವದ ಅರಿವಿಲ್ಲದ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿ. ಬೆಂಕಿ ಹಾಕೋದು, ಸಮುದ್ರಕ್ಕೆ ಬಿಸಾಕೋದು ಬರೀ ಇಂತಹುದನ್ನೇ ತಲೆಯಲ್ಲಿ ತುಂಬಿಕೊಂಡಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹೀಗೆ ತನ್ನನ್ನು ಮುಳುಗಿಸ್ತೇನೆ ಅಂತ ಬಂದ ಬಹಳಷ್ಟು ಜನರನ್ನು ನೋಡಿದೆ" ಎಂದು ಹೇಳಿದರು.

ಭಾಷಣದಿಂದ ಜನರ ಹೊಟ್ಟೆ ತುಂಬಲ್ಲ

ಭಾಷಣದಿಂದ ಜನರ ಹೊಟ್ಟೆ ತುಂಬಲ್ಲ

"ಕಳೆದ ವರ್ಷದ ಪ್ರವಾಹದಲ್ಲಿ ಬಿದ್ದ ಮನೆಗಳನ್ನೇ ಕಟ್ಟಿಸಿಕೊಟ್ಟಿಲ್ಲ. ಈ ವರ್ಷದ ಪ್ರವಾಹದಲ್ಲಿ ಇನ್ನಷ್ಟು ಮನೆಗಳು ಬಿದ್ದಿವೆ. ಜಿಲ್ಲಾಧಿಕಾರಿಗಳಿಗೆ ದುಡ್ಡು ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಅವರ ಪಿ.ಡಿ ಖಾತೆಯಲ್ಲಿ ದುಡ್ಡಿದ್ದರೆ ಸಂತ್ರಸ್ತರಿಗೆ ತಲುಪತ್ತಾ? ಈ ವರ್ಷ ಯಾರಿಗಾದರೂ ಪರಿಹಾರ ಕೊಟ್ಟಿದ್ದಾರಾ?. ನಿಮ್ಮ ಭಾಷಣದಿಂದ ಜನರ ಹೊಟ್ಟೆ ತುಂಬಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.

ಪರಿಹಾರ ಯಾವಾಗ ಕೊಡುವಿರಿ?

ಪರಿಹಾರ ಯಾವಾಗ ಕೊಡುವಿರಿ?

"ನಮ್ಮ ಸರ್ಕಾರ ಪ್ರಾರಂಭಿಸಿದ್ದ ಯೋಜನೆಗಳನ್ನು ಒಂದೊಂದಾಗಿ ನಿಲ್ಲಿಸುತ್ತಿದ್ದಾರೆ. ಅನ್ನಭಾಗ್ಯದ ಅಕ್ಕಿಯನ್ನು 7 ಕೆ.ಜಿಯಿಂದ 5ಕ್ಕೆ ಇಳಿಸಿದ್ದಾರೆ. ಇಂದಿರಾಕ್ಯಾಂಟೀನ್‌ಗೆ ದುಡ್ಡು ಕೊಡದೆ ಮುಚ್ಚಲು ಹೊರಟಿದ್ದಾರೆ. ದನ-ಕುರಿ ಸತ್ತರೆ ಪರಿಹಾರ ಕೊಡುತ್ತಿಲ್ಲ, ಕ್ಷೀರಧಾರೆಯಲ್ಲಿ ಹಾಲಿನ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಕೇಂದ್ರ ತಂಡ ರಾಜ್ಯದ ಪ್ರವಾಹ ಸಮೀಕ್ಷೆ ನಡೆಸಿ ಇಷ್ಟು ದಿನವಾಯ್ತಲ್ಲ ಒಂದು ರೂಪಾಯಿಯಾದ್ರೂ ಪರಿಹಾರ ಬಂದಿದೆಯಾ?. ಪರಿಹಾರ ಯಾವಾಗ ಕೊಡುತ್ತೀರಿ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

English summary
Karnataka leader of opposition Siddaramaiah alleged that Yediyurappa lead govt has become a percentage government. Funds for assembly segments represented by opposition MLAs were not being given.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X