ಬೆಳಗಾವಿ: ಗುಂಡು ಹಾರಿಸಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ
ಬೆಳಗಾವಿ, ಜುಲೈ 19 : ಬೆಳಗಾವಿಯ ಬಿಜೆಪಿ ಬ್ಲಾಕ್ ಉಪಾಧ್ಯಕ್ಷ ತನ್ನ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದ ನಿವಾಸಿ ಶಿವನಗೊಡ ಪಾಟೀಲ ಎಂದಿನಂತೆ ಗ್ರಾಮದ ದೇವಸ್ಥಾನಕ್ಕೆ ಹೋದಲ್ಲಿಯೇ ತನ್ನ ಬಳಿ ಇದ್ದ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡಿದ್ದಾನೆ.

ಗ್ರಾಮದ ಗಿರಿಮಲ್ಲೇಶ್ವರ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಶಿವನಗೌಡ ಪಾಟೀಲ್ ಜನರ ಮಧ್ಯೆಯೇ ದೇವಸ್ಥಾನದಲ್ಲೇ ತನ್ನ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದ ಕೂಡಲೇ ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ.












Click it and Unblock the Notifications