"ಸುರೇಶ ಅಂಗಡಿ ಪತ್ನಿಯ ಅವಿರೋಧ ಆಯ್ಕೆಗೆ ಪ್ರಕಾಶ್ ಹುಕ್ಕೇರಿ ಶ್ರಮಿಸಲಿ''
ಬೆಳಗಾವಿ, ಅಕ್ಟೋಬರ್ 27: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ.
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಉಮೇಶ್ ಕತ್ತಿ, ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಯಿಂದ ದಿ. ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕು ಎಂದರು.
ಈ ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಪ್ರಕಾಶ್ ಹುಕ್ಕೇರಿ ಅವರು ಚರ್ಚಿಸಿ ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹಾಕದಂತೆ ಮನವಿ ಮಾಡಲಿ ಎಂದು ಸಲಹೆ ನೀಡಿದರು.

ಮಾಜಿ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆಯಿಂದ ನನಗೆ ಸಂತೋಷವಾಗಿದೆ. ದಿ.ಸುರೇಶ ಅಂಗಡಿ ಅವರ ಪತ್ನಿಯನ್ನು ಆಯ್ಕೆ ಮಾಡಿ ಎಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಬೇಕು. ನಾವು ಕೂಡ ಸುರೇಶ ಅಂಗಡಿ ಪತ್ನಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.
ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ನೀಡದಂತೆ ಪ್ರಕಾಶ ಹುಕ್ಕೇರಿ ನೋಡಿಕೊಳ್ಳಲಿ. ಬೆಂಗಳೂರು ಹಾಗೂ ದೆಹಲಿಯ ಹೈಕಮಾಂಡ್ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಣಯ ಕೈಗೊಳ್ಳಲುಬಿಜೆಪಿ ಶಾಸಕ ಉಮೇಶ್ ಕತ್ತಿ ಆಗ್ರಹಿಸಿದರು.
ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಉಮೇಶ್ ಕತ್ತಿ ಹೇಳಿದರು. ದಿ.ಸುರೇಶ್ ಅಂಗಡಿ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಾನೇ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇತ್ತಿಚೇಗೆ ಹೇಳಿಕೆ ನೀಡಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications