C.T Ravi: ನನ್ನನ್ನು ಕೊಲ್ಲುತ್ತಾರೆ ಎಂದು ಗೋಗರೆದ ಸಿ.ಟಿ ರವಿ: ಬಿಜೆಪಿ ಫುಲ್‌ ಗರಂ

ಬೆಂಗಳೂರು, ಡಿಸೆಂಬರ್‌ 20: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಬಂಧನ ಬಳಿಕ ಸಿ.ಟಿ ರವಿ ತಲೆಗೆ ಪೆಟ್ಟಾಗಿದ್ದು, ನನ್ನನ್ನು ಕೊಲ್ಲುತ್ತಾರೆ..ಕಾಪಾಡಿ ಎಂದು ಗೋಗರೆದಿದ್ದಾರೆ.

ಈ ಬಗ್ಗೆ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿದ್ದು, ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, ಕಾಂಗ್ರೆಸ್ ಸರ್ಕಾರ ಕೊಲೆ‌ ಮಾಡಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ? ಎಂದು ಪ್ರಶ್ನಿಸಿದ್ದಾರೆ.

BJP MLC C T Ravi Arrest BJP Activists Protest In Front Of Police Station

ಇನ್ನು ಈ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದ್ದು, ಒಬ್ಬ ಶಾಸಕನನ್ನೇ ಕೊಲೆ ಮಾಡಲು ಯತ್ನಿಸುತ್ತಿದೆಯೇ ರಾಜ್ಯ ಕಾಂಗ್ರೆಸ್ ಸರ್ಕಾರ? ಬಂಧಿತರನ್ನು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದು ಪೊಲೀಸ್ ಠಾಣೆಗೆ ಅಕ್ರಮವಾಗಿ ಕರೆದುಕೊಂಡು ಹೋಗಿ, ದಾರಿ ಮಧ್ಯೆ ಎನ್‌ಕೌಂಟರ್‌ ಮಾಡಲು ಯೋಜನೆ ರಾಜ್ಯ ಸರ್ಕಾರ ರೂಪಿಸಿತ್ತೇ ಎನ್ನುವ ಅನುಮಾನ ಕಾಡುತ್ತಿದೆ.

ದೆಹಲಿಯಲ್ಲಿ ವಿಪಕ್ಷ ನಾಯಕ ಬಿಜೆಪಿ ಸಂಸದರ‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯರು ಮತ್ತು ಮಾಜಿ ಸಚಿವರಾದ ಸಿ.ಟಿ. ರವಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯ ಮೂಲಕ ಮರ್ಡರ್ ಮಾಡಿಸಲು ಪ್ರಯತ್ನ ನಡೆಸಿರುವುದು ಖಂಡನೀಯ. ಒಬ್ಬ ಮಾಜಿ ಸಚಿವ, ಹಾಲಿ ಪರಿಷತ್ ಸದಸ್ಯರ ಮೇಲೆ‌ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

BJP MLC C T Ravi Arrest BJP Activists Protest In Front Of Police Station

ಅಷ್ಟಕ್ಕೂ ಆಗಿದ್ದೇನು?

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ದೂರು ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸುವರ್ಣ ಸೌಧದಿಂದಲೇ ಬಿಜೆಪಿ ನಾಯಕ ಸಿ.ಟಿ. ರವಿ ಅವರನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಭದ್ರತಾ ದೃಷ್ಟಿಯಿಂದ ಸಿ.ಟಿ. ರವಿ ಅವರನ್ನು ಖಾನಾಪುರ ಪೊಲೀಸ್‌ ಠಾಣೆಗೆ ಸ್ಥಳಾಂತರ ಮಾಡಲಾಗಿದ್ದು, ನಿನ್ನೆ ಇಡೀ ರಾತ್ರಿ ಪೊಲೀಸ್‌ ಠಾಣೆಯ ಮುಂದೆ ಹೈಡ್ರಾಮ ನಡೆದಿದೆ.

ರಾಜ್ಯ ಬಿಜೆಪಿ ನಾಯಕರು ಮಾತ್ರವಲ್ಲದೇ ಖಾನಾಪುರ ಸೇರಿದಂತೆ ಬೆಳಗಾವಿಯ ಮೂಲೆ ಮೂಲೆಯಿಂದ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ಠಾಣೆಯ ಬಳಿ ಜಮಾಯಿಸಿದ್ದು, ಪೊಲೀಸರ ವಿರುದ್ಧ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದರು. ಕೊನೆಗೆ ನಿನ್ನೆ ಮಧ್ಯೆರಾತ್ರಿ 12.15ಕ್ಕೆ ಖಾನಾಪುರದಿಂದ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವೇಳೆ ನಾಲ್ವರು ಪೊಲೀಸರು ಸಿ.ಟಿ ರವಿಯನ್ನು ಹೆಗಲ ಮೇಲೆ ಹೊತ್ತಿಕೊಂಡು ಪೊಲೀಸ್‌ ವಾಹನದಲ್ಲಿ ಕೂರಿಸಿದ್ದಾರೆ. ಈ ವೇಳೆ ಸಿ.ಟಿ ರವಿ ತಲೆಗೆ ಪೆಟ್ಟಾಗಿದ್ದು, ರಕ್ತ ಚಿಮ್ಮಿದೆ. ಇದರಿಂದ ಕಾಪಾಡಿ.. ಕಾಪಾಡಿ.. ನನ್ನನ್ನು ಕೊಲ್ತಾರೆ ಎಂದು ಸಿ.ಟಿ ರವಿ ಗೋಗರೆದಿದ್ದಾರೆ. ಸಿ.ಟಿ ರವಿಯನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದು, ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಸಿ.ಟಿ ರವಿ ಇರುವ ವಾಹನಕ್ಕೆ ಪೊಲೀಸ್‌ ಬಿಗಿ ಭದ್ರತೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+