• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ನೀವು ಬಂಡೆ.. ಎಲ್ಲವನ್ನೂ ಎದುರಿಸೋರು ಸಿಬಿಐ ಎದುರಿಸಕ್ಕಾಗಲ್ವಾ?"

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಅಕ್ಟೋಬರ್ 11: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮಾಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ""ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂಬ ಆರೋಪಕ್ಕೆ ತಿರುಗೇಟು ನೀಡಿದರು. ಸಿಬಿಐ ಸ್ವತಂತ್ರ ಸಂಸ್ಥೆಯಾಗಿದೆ, ಕಾಂಗ್ರೆಸ್ ಕಾಲಘಟ್ಟದಲ್ಲಿಯೇ ನಿರ್ಮಾಣ ಆಗಿರುವುದು'' ಎಂದು ತಿಳಿಸಿದರು.

ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿ ಸಿದ್ಧ: ಕಟೀಲ್

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದ್ದು, ಲಾಲೂಪ್ರಸಾದ್ ಯಾದವ್, ಜಯಲಲಿತಾರಂತ ಘಟಾನುಘಟಿ ನಾಯಕರ ಮನೆ ಮೇಲೆ ಸಿಬಿಐ ದಾಳಿಯಾಗಿದೆ ಎಂದು ಹಿಂದಿನ ಸಿಬಿಐ ದಾಳಿಯನ್ನು ನೆನಪಿಸಿದರು.

ಹಿಂದಿನ ಎಲ್ಲ ಸಿಬಿಐ ದಾಳಿಗಳನ್ನು ಕಾಂಗ್ರೆಸ್ ರಾಜಕಾರಣ ಮಾಡಿಸಿರಬೇಕು, ಕಾಂಗ್ರೆಸ್ ಅದನ್ನೆಲ್ಲಾ ರಾಜಕೀಯ ದ್ವೇಷಕ್ಕಾಗಿಯೇ ಮಾಡಿಸಿತ್ತಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಂದು ಸಿಬಿಐಯನ್ನು ದಾಳವಾಗಿ ಮಾಡಿಕೊಂಡು ಆಟವಾಡಿಸಿತ್ತಾ? ಅವರು ಆ ಕಾರಣಕ್ಕಾಗಿ ಹಾಗೆ ಮಾಡಿಸಿದ್ದರೆ, ಇದು ಹಾಗೇ ಅಂತಾ ತಿಳಿದುಕೊಳ್ಳೋಣವೆಂದರು.

ನೀವು ಸರಿ ಇದ್ದರೆ ಕಾನೂನು ಹೋರಾಟ ಮಾಡಿ ಆದರೆ ನಿಮಗೇಕೆ ಭಯ? ಯಾಕೆ ಜನ ಸೇರಿಸಬೇಕು ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು.

ಡಿ.ಕೆ ಶಿವಕುಮಾರ್, ನಿಮ್ಮ ಮನೆ ಮೇಲೆ ಸಿಬಿಐ ದಾಳಿಯಾಗಿದೆ, ಐಟಿ ತನಿಖೆಯಾಗಿದೆ, ಕಾನೂನಾತ್ಮಕ ಹೋರಾಟ ಮಾಡಿ ಪರಿಶುದ್ಧರಾಗಿ ಹೊರ ಬನ್ನಿ. ಕಾನೂನಿಗೆ ಹೆದರುವುದು ಏಕೆ? ನೀವು ಧೈರ್ಯವಂತರು, ಬಂಡೆ ಎಂದು ಕಾಲೆಳೆದರು.

ಎಲ್ಲರನ್ನೂ ಎದುರಿಸುವವರು, ಸಿಬಿಐ ಎದುರಿಸುವುದಕ್ಕೆ ಆಗಲ್ವಾ? ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಉಪಸ್ಥಿತರಿದ್ದರು.

English summary
BJP President Nalin Kumar Kateel has reacted sharply to the CBI raid on KPCC president DK Shivakumar's house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X