ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಕೊರೊನಾ ವಾರಿಯರ್ಸ್ ಗಳಿಂದ ರಕ್ತದಾನ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮೇ 7: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಬೆಳಗಾವಿ ಜಿಲ್ಲಾ ಶಾಖೆಯ ವತಿಯಿಂದ ವಾರ್ತಾ ಭವನ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಶಿಬಿರದಲ್ಲಿ ಕೊರೊನಾ ವಾರಿಯರ್ಸ್ ಹಾಗೂ ಮತ್ತಿತರರು ರಕ್ತದಾನ ಮಾಡಿದರು.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತುರ್ತು ಅಗತ್ಯವಿರುವ ಕುಟುಂಬಗಳಿಗೆ ಔಷಧಿ, ದಿನಸಿ ಒದಗಿಸಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಜನಜಾಗೃತಿ ಸೇರಿದಂತೆ ವಿವಿಧ ಬಗೆಯ ಕೆಲಸಗಳನ್ನು ಸ್ವಯಂ ಪ್ರೇರಣೆಯಿಂದ ಮಾಡುತ್ತಿರುವ ಸ್ವಯಂಸೇವಕರು ಹಾಗೂ ಇತರರು ಸೇರಿದಂತೆ 26 ಜನರು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.

ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಅಧ್ಯಕ್ಷ ಅಶೋಕ‌ ಬಾದಾಮಿ ಹಾಗೂ ಕಾರ್ಯದರ್ಶಿಗಳಾದ ಡಿ.ಎನ್ ಮಿಸಾಳೆ ಅವರು ತುರ್ತು ವೈದ್ಯಕೀಯ ಸಂದರ್ಭದಲ್ಲಿ ರಕ್ತದ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶದಿಂದ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

Blood Donation From Corona Warriors In Belagavi

ಕೊರೊನಾ ಸಂದರ್ಭದಲ್ಲೂ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಲು ಮುಂದಾದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಬಿಮ್ಸ್ ರಕ್ತ ಭಂಡಾರದ ಅಧಿಕಾರಿ ಡಾ.ಶ್ರೀದೇವಿ, ಕೊರೊನಾ ವಾರಿಯರ್ಸ್ ಗಳಾದ ಬಸವರಾಜ ಕೋಳುಚೆ, ಶಿವಾನಂದ ಗುಮ್ಮಗೋಳ, ಅವಧೂತ್ ಮಾನಗೆ, ಪ್ರವೀಣ ಹಿರೇಮಠ, ಕೋಮಲ ಕೊಳ್ಳಿಮಠ, ರಾಜಶೇಖರ ಕೊಳ್ಳಿಮಠ, ಆನಂದ ಮತ್ತಿತರರು ಉಪಸ್ಥಿತರಿದ್ದರು.

English summary
Corona Warriors and others donated blood at the camp, which was held on Tuesday at the Varta Bhavan, by the Belagavi District Branch of the Red Cross.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X