ನಿಗಮ-ಮಂಡಳಿ ನೇಮಕ ಮತ್ತಷ್ಟು ವಿಳಂಬ

ಬೆಳಗಾವಿ, ಅ. 10 : ಕರ್ನಾಟಕದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಸಿದ್ಧಗೊಂಡಿದೆ. ನೇಮಕ ಪ್ರಕ್ರಿಯೆಗೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ಪರಮೇಶ್ವರ ಅವರು, ಪ್ರತಿ ಜಿಲ್ಲೆಯಿಂದ 10 ಮಂದಿ ಆಕಾಂಕ್ಷಿಗಳ ಪಟ್ಟಿ ಕಳಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ, ಕೆಲವು ಜಿಲ್ಲೆಗಳಿಂದ ಇದುವರೆಗೆ ಪಟ್ಟಿ ಬಂದಿಲ್ಲ ಎಂದು ಹೇಳಿದರು. [ನಿಗಮ-ಮಂಡಳಿ ನೇಮಕಕ್ಕೆ ಎಐಸಿಸಿ ಮಾರ್ಗಸೂಚಿಗಳು]

ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವೇಳೆ ಎಲ್ಲಾ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಆದ್ದರಿಂದ ಪಟ್ಟಿ ಬರುವ ತನಕ ನೇಮಕಾತಿ ಪ್ರಕ್ರಿಯೆ ವಿಳಂಬವಾಗಲಿದೆ. ಬಹುತೇಕ ಪಟ್ಟಿ ಸಿದ್ಧಗೊಂಡಿದ್ದು, ಎಲ್ಲಾ ಜಿಲ್ಲೆಗಳಿಂದ ಪಟ್ಟಿ ಬಂದ ಬಳಿಕ ಅದನ್ನು ಅಂತಿಮಗೊಳಿಸಲಾಗುವುದು ಎಂದು ಪರಮೇಶ್ವರ ತಿಳಿಸಿದರು. [ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಮುಖ್ಯಾಂಶಗಳು]

ಸಿಎಂ ಆಗಬೇಕು : ಉಪ ಮುಖ್ಯಮಂತ್ರಿಯಾಗಬೇಕು, ಮುಖ್ಯಮಂತ್ರಿಯಾಗಬೇಕು ಎಂದು ಹಲವಾರು ರಾಜಕೀಯ ಕನಸುಗಳಿವೆ. ಎಲ್ಲದಕ್ಕೂ ಕಾಲ ಕೂಡಿಬರಬೇಕು ಎಂದು ಪರಮೇಶ್ವರ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ನೀವು ಉಪ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಹೌದೆ? ಎಂದು ಹೇಳಿದ ಪ್ರಶ್ನೆಗೆ ಹೌದು ಎಂದರು.

Belgaum

ಗಡಿ ಸಮಸ್ಯೆ ಬಗ್ಗೆ ಗಮನ ಹರಿಸಿ : 'ಗಡಿ ಪ್ರದೇಶದ ಜನರಿಗೆ ಸೂಕ್ತ ರಕ್ಷಣೆ ನೀಡಬೇಕಾಗಿರುವುದು ಕೇಂದ್ರ ಸರ್ಕಾರದ ಮುಖ್ಯ ಕರ್ತವ್ಯ. ಪಾಕಿಸ್ತಾನ ನಮ್ಮ ಮೇಲೆ ಆಕ್ರಮಣ ಮಾಡುತ್ತಿದ್ದರೆ ಅದನ್ನು ನೋಡಿಕೊಂಡು ನಾವು ಸುಮ್ಮನೇ ಕೂರಬೇಕೆ? ಎಂದು ಬೆಳಗಾವಿಯಲ್ಲಿ ಪ್ರಶ್ನಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯವನ್ನು ಬಿಟ್ಟು, ಗಡಿಭದ್ರತೆ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+