ಬೆಳಗಾವಿ: ಮಹಾ ಮೇಳವಾ ರದ್ದು, ಸೆಕ್ಷನ್ 144 ಜಾರಿ ಮಧ್ಯೆಯೇ ಎಂಇಎಸ್, ಎನ್‌ಸಿಪಿ ಪ್ರತಿಭಟನೆ
ಬೆಳಗಾವಿ, ಡಿ. 19: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಬೆಳಗಾವಿಯಲ್ಲಿ ಮಹಾ ಮೇಳವಾ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜನೆ ಮಾಡಿತ್ತು. ಆದರೆ, ಇದಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರು.
Belagavi, Karnataka | Members of Maharashtra Ekikaran Samiti and NCP stage protest near Kognoli Toll Plaza near Karnataka-Maharashtra border over inter-state border issue pic.twitter.com/XaPJwEbBKv
— ANI (@ANI) December 19, 2022
ಪೊಲೀಸರ ಅನುಮತಿ ನಿರಾಕರಣೆ ಮತ್ತು ಸೆಕ್ಷನ್ 144 ಜಾರಿಯಾಗಿರುವ ಮಧ್ಯೆಯೇ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ - ಮಹಾರಾಷ್ಟ್ರ ಗಡಿ ಬಳಿಯ ಕೊಗ್ನೋಳಿ ಟೋಲ್ ಪ್ಲಾಜಾ ಬಳಿ ಜಮಾಯಿಸಿದ್ದ ನೂರಾರು ಎಂಇಎಸ್ ಮತ್ತು ಎನ್‌ಸಿಪಿ ಕಾರ್ಯಕರ್ತರು, ಘೋಷನೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಗಡಿ ಸಮಸ್ಯೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ವ್ಯಾಕ್ಸಿನ್ ಡಿಪೋ ಮೈದಾನ ಟಿಳಕವಾಡಿಯಲ್ಲಿ ಮಹಾ ಮೇಳವಾ ಆಯೋಜಿಸಿತ್ತು. ಇದಕ್ಕೆ ಬೆಳಗಾವಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ಸಮ್ಮೇಳನ ನಡೆಯಲಿದ್ದ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು.
ಹೀಗಾಗಿ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಹಾಕಲಾಗಿದ್ದ ಮಹಾ ಮೇಳವಾ ವೇದಿಕೆಯನ್ನು ತೆರವುಗೊಳಿಸಲಾಗಿದೆ. ಆದರೂ ಕೂಡ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಈ ಹಿಂದೆಯೂ ಒಮ್ಮೆ ಸಮ್ಮೇಳನ ನಡೆಸಲು ಹೊರಟಿದ್ದರು. ಆದರೆ ಆಗಲೂ ಕಾರ್ಯಕ್ರಮವನ್ನು ನಡೆಸಲು ಆಗಿರಲಿಲ್ಲ. ಈ ಬಾರಿಯೂ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರಿಗೆ ಮುಖಭಂಗವಾಗಿದೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications