ಸದಾ ವಿವಾದಕ್ಕೆ ಅಂಟಿಕೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಯಾರು?

ಕರ್ನಾಟಕ ಕಾಂಗ್ರೆಸ್ ನ ಪ್ರಭಾವಿ ನಾಯಕಿಯರಲ್ಲಿ ಒಬ್ಬರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಪ್ರಸ್ತುತ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗುವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಂಕ್ಷಿಪ್ತ ವ್ಯಕ್ತಿಚಿತ್ರ ಇಲ್ಲಿದೆ.

* 1975 ರಲ್ಲಿ ಬೆಳಗಾವಿಯ ಲಿಂಗಾಯತ ಮನೆತನದಲ್ಲಿ ಜನನ

* ಬೆಳಗಾವಿಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ ಲಕ್ಷ್ಮಿ ಅವರು ಚಿಕ್ಕ ವಯಸ್ಸಿನಿಂದಲೂ ಅಪಾರ ಬುದ್ಧಿವಂತೆ. ವಿದ್ಯಾಭ್ಯಾಸದಲ್ಲಿ ಎಂದಿಗೂ ಮುಂದು.

* ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.

* ರವೀಂದ್ರ ಹೆಬ್ಬಾಳ್ಕರ್ ಅವರೊಂದಿಗೆ ವಿವಾಹ. ಲಕ್ಶ್ಮಿ ಅವರು ರಾಜಕೀಯವಾಗಿ ಬೆಳೆಯಲು ರವೀಂದ್ರ ಅವರಿಂದ ನಿರಂತರ ಸಹಕಾರ

* ಬೆಳಗಾವಿಯ ಹಿಂಡಲ್ಗಾದ ಕುವೆಂಪುನಗರದಲ್ಲಿ ವಾಸ

* 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು.

* 2014 ರ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಬಿಜೆಪಿಯ ಸುರೇಶ್ ಅಂಗಡಿ ವಿರುದ್ಧ ಸೋಲು

* ದೂರದೃಷ್ಟಿಯುಳ್ಳ ನಾಯಕಿ ಎಂಬ ಕಾರಣಕ್ಕೆ ಕಾಂಗ್ರೆಸ್ಸಿನಲ್ಲಿ ಪ್ರಮುಖ ಸ್ಥಾನ

* ಮಹಿಳಾ ಸಬಲೀಕರಣದ ಪರವಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಯ್ಕೆ.

* 16 ವರ್ಷಗಳಿಂದ ಕಾಂಗ್ರೆಸ್ ನ ಸಕ್ರಿಯ ರಾಜಕಾರಣಿಯಾಗಿ ಕೆಲಸಮಾಡಿದ್ದಾರೆ.

* 2015 ರಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಯ್ಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+