ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ; ಯಡಿಯೂರಪ್ಪ ಸ್ಪಷ್ಟನೆ

|
Google Oneindia Kannada News

ಬೆಳಗಾವಿ, ಆಗಸ್ಟ್ 08 : "ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸಿದರೂ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಚಿಕ್ಕೋಡಿಯ ಪ್ರವಾಸಿಮಂದಿರದಲ್ಲಿ ಗುರುವಾರ ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿದರು.

ಆಲಮಟ್ಟಿ ಜಲಾಶಯ ಭರ್ತಿ : 32 ಸಾವಿರ ಕ್ಯೂಸೆಕ್ ನೀರು ಹೊರಕ್ಕೆಆಲಮಟ್ಟಿ ಜಲಾಶಯ ಭರ್ತಿ : 32 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

"ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ವರದಿಗಳು ಪ್ರಕಟವಾಗುತ್ತಿವೆ" ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.

 BS Yediyurappa Clarification On Alamatti Dam

"ಆಲಮಟ್ಟಿಯಿಂದ ಸಾಂಗ್ಲಿ ಹಾಗೂ ಕೊಲ್ಲಾಪುರ ಬಹಳ ದೂರದಲ್ಲಿವೆ. ಆದ್ದರಿಂದ ಈ ಜಲಾಶಯಗಳ ಹಿನ್ನೀರು ಆ ಜಿಲ್ಲೆಯ ವ್ಯಾಪ್ತಿಯವರೆಗೆ ನಿಲ್ಲುವುದಿಲ್ಲ. ಆಲಮಟ್ಟಿ ಜಲಾಶಯದಲ್ಲಿ ಗರಿಷ್ಠ 123 ಟಿಎಂಸಿ ಅಡಿ ನೀರು ಸಂಗ್ರಹಿಸಬಹುದು. ಆದರೆ ಸದ್ಯಕ್ಕೆ ಕೇವಲ 85 ಟಿಎಂಸಿ ಅಡಿ ನೀರು ಮಾತ್ರ ಇದೆ. ಅದೇ ರೀತಿ ನಾರಾಯಣಪುರ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ 33 ಟಿಎಂಸಿ ಅಡಿ. ಸದ್ಯ 18 ಟಿಎಂಸಿ ಮಾತ್ರ ನೀರಿದೆ" ಎಂದು ಯಡಿಯೂರಪ್ಪ ತಿಳಿಸಿದರು.

"ಆಲಮಟ್ಟಿ ನೀರಿನಿಂದ ಅವರಿಗೆ ಅಪಾಯವಿಲ್ಲ. ನಮ್ಮ ರಾಜ್ಯಕ್ಕೇ ತೊಂದರೆಯಿದೆ.
ನಮ್ಮ ಜಲಾಶಯಗಳಲ್ಲಿ ನೀರು ಸಂಗ್ರಹದಿಂದ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ನಮ್ಮಿಂದ ಅವರಿಗೆ ತೊಂದರೆಯಾಗಲು ಬಿಡುವುದಿಲ್ಲ" ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

2005-06ರ ಮಳೆಗೆ ಬೆಳಗಾವಿಯಲ್ಲಿ ಆದ ಹಾನಿ ಪ್ರಮಾಣ 424 ಕೋಟಿಗೂ ಹೆಚ್ಚು 2005-06ರ ಮಳೆಗೆ ಬೆಳಗಾವಿಯಲ್ಲಿ ಆದ ಹಾನಿ ಪ್ರಮಾಣ 424 ಕೋಟಿಗೂ ಹೆಚ್ಚು

"ಮಹಾರಾಷ್ಟ್ರದ ಸಿಎಂ ಜೊತೆ ಈಗಾಗಲೇ ಈ ಬಗ್ಗೆ ಮೂರು ಬಾರಿ ಚರ್ಚೆ ಮಾಡಿದ್ದೇನೆ. ಅಲ್ಲಿನ ಕೆಲ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಕಟವಾಗುತ್ತಿರುವುದರಿಂದ ಮತ್ತೆ ಸ್ಪಷ್ಟನೆ ನೀಡುತ್ತಿದ್ದೇನೆ" ಎಂದು ಹೇಳಿದರು.

English summary
Karnataka Chief Minister B.S.Yediyurappa said that there is no threat for Maharashtra due to water storage at Alamatti dam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X