ಮೋದಿ ವಿರುದ್ಧ ಮಾತನಾಡಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆ ಇದೆ: ಯಡಿಯೂರಪ್ಪ ತಿರುಗೇಟು
ಬೆಳಗಾವಿ, ಮಾರ್ಚ್ 27: ಮೋದಿ ಮೋದಿ ಎನ್ನುವರಿಗೆ ಕಪಾಳಕ್ಕೆ ಹೊಡೆಯಬೇಕು ಎಂಬ ಹೇಳಿಕೆ ಖಂಡನೀಯ. ಪ್ರಧಾನಿ ಮೋದಿಯವರ ಬಗ್ಗೆ ಮಾತನಾಡಿದರೆ ತಾವು ದೊಡ್ಡವರು ಆಗುತ್ತಾರೆ ಎಂಬ ಭ್ರಮೆ ಹಲವರಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿರುಗೇಟು ಕೊಟ್ಟರು.
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಯಡಿಯೂರಪ್ಪ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಬುಧವಾರ ಸಭೆ ನಡೆಯಿತು. ಈ ವೇಳೆ ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಬಾರಿಸಿ ಎಂದ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಪ್ರಧಾನಿ ಮೋದಿ ಹೆಸರು ಹೇಳಿ ಮತ ಕೇಳಿದರೆ ಕಪಾಳಮೋಕ್ಷ ಮಾಡಿ ಎಂಬ ಹೇಳಿಕೆ ಇದು ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೂ ಶೋಭೆ ತರುವುದಿಲ್ಲ. ಇಂತಹ ಹೇಳಿಕೆಗಳು ಅವರ ಅತಿರೇಕದ ಪರಾಮಾವಧಿಯನ್ನು ಸೂಚಿಸುತ್ತವೆ. ಹೀಗೆ ಹಗುರವಾಗಿ ಮಾತನಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ಅವರು ಒತ್ತಾಯಿಸಿದರು.
ನಿಮ್ಮ ಹೇಳಿಕೆಗಳು ಸಿಎಂ ಸ್ಥಾನಕ್ಕೆ ಗೌರವ ತರಲ್ಲ
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಆಗಿದೆ. ಇಲ್ಲಿ ಎಲ್ಲರೂ ಸೇರಿ ಜಗದೀಶ್ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಕ್ಷೇತ್ರ ಗೆಲ್ಲಿಸಬೇಕು. ಇದೇ ನಮ್ಮ ಗುರಿಯಾಗಿದೆ ಎಂದರು.

ಬರ ಪರಿಹಾರ, ಸೇರಿದಂತೆ ಕರ್ನಾಟಕಕ್ಕೆ ಕೇಂದ್ರದ ಅನುದಾನ ಹಂಚಿಕೆ ಕುರಿತು ಈಗಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ವಿರುದ್ಧ ಇಲ್ಲ ಸಲ್ಲದ ಆರೋಪ, ಹೇಳಿಕೆಗಳನ್ನು ಕಡಿಮೆ ಮಾಡಿ. ಇಲಲ್ವಾದರೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸ್ಥಾನಕ್ಕೆ ಇದು ಗೌರವ ತರುವುದಿಲ್ಲ ಎಂದು ಅವರು ಎಚ್ಚರಿಸಿದರು.
ಲೋಸಕಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮಧ್ಯೆ ಮೈತ್ರಿ ಆಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ಚಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಲಿ ಸಂಸದೇ ಸುಮಲತಾ ಅಂಬರೀಶ್ ಅವರಿಗೆ ಬೇರೆ ಅವಕಾಶ ಇದೆ. ಅವರು ಸಮಾಧಾನದಿಂದ ಇದ್ದಲ್ಲಿ ಅವರಿಗೆ ಮುಂದೆ ಉತ್ತಮ ಗೌರವ, ಅವಕಾಶಗಳು ಸಿಗುತ್ತವೆ ಎಂದು ಯಡಿಯೂರಪ್ಪ ವಿವರಿಸಿದರು.
ಕೊಪ್ಪಳದಲ್ಲಿ ಸಚಿವರು ಹೇಳಿದ್ದೇನು?
ಕೊಪ್ಪಳದ ಉಸ್ತುವಾರಿ ಆಗಿರುವ ಕನ್ನಡ ಮತ್ತು ಸಂಸ್ಕತಿ ಇಲಾಕೆ ಸಚಿವ ಶಿವರಾಜ್ ತಂಗಡಿ ಅವರು ಕಾರ್ಯಕರ್ತರ ಸಭೆಯಲ್ಲಿ ಮೋದಿ ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿದ್ದರು. ಇದು ಬಿಜೆಪಿ ಸೇರಿದಂತೆ ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿಯವರು ಹೇಳಿದಂತೆ ಉದ್ಯೋಗ ಸೃಷ್ಟಿಯಾಗಿಲ್ಲ ಎಂದು ಸಚಿವರು ವಾಗ್ದಾಳಿ ನಡೆಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅವರು ಸಚಿವರ ಹೇಳಿಕೆ ಖಂಡಿಸಿದ್ದಾರೆ. ಇತ್ತ ಬಿಜೆಪಿಯು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣಾ ಪ್ರಕ್ರಿಯೆಯಿಂದ ಸಚಿವರನ್ನು ಹೊರಗಿಡುವಂತೆ ಬಿಜೆಪಿ ಮನವಿ ಮಾಡಿದೆ.












Click it and Unblock the Notifications