ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸಭೆಯೊಳಗೆ ಮೊಬೈಲ್ ಬಳಕೆ, ಶಾಸಕ ಎನ್.ಮಹೇಶ್ ಸ್ಪಷ್ಟನೆ

|
Google Oneindia Kannada News

ಬೆಳಗಾವಿ, ಡಿಸೆಂಬರ್ 19 : ವಿಧಾನಸಭೆಯೊಳಗೆ ಶಾಸಕರು ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಮೊಬೈಲ್ ತಗೆದುಕೊಂಡು ಹೋಗಿ ಸುದ್ದಿಯಾಗಿದ್ದಾರೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಸೋಮವಾರ ಮಾಜಿ ಸಚಿವ, ಬಿಎಸ್‌ಪಿ ಶಾಸಕ ಎನ್.ಮಹೇಶ್ ಸದನಕ್ಕೆ ಮೊಬೈಲ್ ತೆಗೆದುಕೊಂಡು ಹೋಗಿದ್ದರು. ಶಾಸಕರ ಜೊತೆ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಹುಡುಗಿಯ ಫೋಟೋವನ್ನು ವೀಕ್ಷಣೆ ಮಾಡುತ್ತಿದ್ದರು.

ಸದನದಲ್ಲಿ ಮೊಬೈಲ್ ಫೋನ್ ಬ್ಯಾನ್ ಅತ್ಯಂತ ಕೆಟ್ಟ ಕ್ರಮ!

ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎನ್.ಮಹೇಶ್ ಅವರು ವಿಧಾನಸೌಧದಲ್ಲಿಯೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಮೊಬೈಲ್ ತೆಗೆದುಕೊಂಡು ಹೋಗಿದ್ದು, ನನ್ನ ತಪ್ಪು ಎಂದು ಅವರು ಹೇಳಿದ್ದಾರೆ.

ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆ : ಯಾರು, ಏನು ಹೇಳಿದರು?ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆ : ಯಾರು, ಏನು ಹೇಳಿದರು?

BSP MLA N Mahesh clarification on mobile use in assembly

'ನಾನು ಮೊಬೈಲ್ ತೆಗೆದುಕೊಂಡು ಹೋಗುತ್ತಿರಲಿಲ್ಲ. ಕೊಳ್ಳೇಗಾಲ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆ ಬಗ್ಗೆ ಕರೆಗಳು ಬರಬಹುದು ಎಂದು ಮೊಬೈಲ್ ತೆಗೆದುಕೊಂಡು ಹೋಗಿದ್ದೆ' ಎಂದು ಅವರು ತಿಳಿಸಿದ್ದಾರೆ.

ಮತ್ತೆ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ ಎನ್‌.ಮಹೇಶ್‌ಮತ್ತೆ ಸಂಪುಟ ಸೇರುವ ಇಂಗಿತ ವ್ಯಕ್ತಪಡಿಸಿದ ಎನ್‌.ಮಹೇಶ್‌

'ಮಗನಿಗೆ ಹುಡುಗಿ ನೋಡುತ್ತಿದ್ದೇನೆ. ಹಾಗಾಗಿ ಮೊಬೈಲ್‌ನಲ್ಲಿ ಹುಡುಗಿನ ಫೋಟೋವನ್ನು ನೋಡುತ್ತಿದ್ದೆ. ಸದನಕ್ಕೆ ಮೊಬೈಲ್ ತೆಗೆದುಕೊಂಡು ಹೋಗಿರುವುದು ನನ್ನ ತಪ್ಪು' ಎಂದು ಎನ್.ಮಹೇಶ್ ಸ್ಪಷ್ಟನೆ ಕೊಟ್ಟಿದ್ದಾರೆ.

ಮೊಬೈಲ್ ನಿಷೇಧ : ಹಿಂದೆ ಬೆಳಗಾವಿ ಅಧಿವೇಶನದ ಸಮಯದಲ್ಲಿಯೇ ಬಿಜೆಪಿ ಶಾಸಕರೊಬ್ಬರು ಕಾಂಗ್ರೆಸ್ ನಾಯಕಿಯೊಬ್ಬರ ಫೋಟೋವನ್ನು ಮೊಬೈಲ್‌ನಲ್ಲಿ ನೋಡುತ್ತಿದ್ದರು. ಈ ಪ್ರಕರಣ ಬೆಳಕಿಗೆ ಬಂದು ವಿವಾದ ಉಂಟಾಗಿತ್ತು.

ಆಗ ಅಂದಿನ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸದನದೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದ್ದರು. ನಿಷೇಧವಿದ್ದರೂ ಶಾಸಕ ಮೊಬೈಲ್ ತೆಗೆದುಕೊಂಡು ಹೋಗಿದ್ದರು.

English summary
Former minister and Kollegal BSP MLA N.Mahesh was caught on camera scrolling through a picture of a woman on his mobile phone during the winter Assembly session in Belagavi. Mobile phone banned inside the assembly in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X