ಜಾರಕಿಹೊಳಿ ಪರ ಅಬ್ಬರದ ಪ್ರಚಾರಕ್ಕಿಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ, ಏಪ್ರಿಲ್ 1: ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರ ನಡೆಸಿದರು.

ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ವಾದ್ಯ-ಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ್ ಅವರ ಪರ ಘೋಷಣೆಗಳನ್ನು ಕೂಗಿದರು.

ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, "ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಶಕ್ತಿ. ಅವರು ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಚಟುವಟಿಕೆಗಳು ಸೇರಿದಂತೆ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ನಾಯಕರಾಗಿದ್ದಾರೆ.

Belagavi By-Election: Satish Jarkiholi And Lakshmi Hebbalkar Election Campaigned In Belagavi Rural

ಹೀಗಾಗಿ, ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಸತೀಶ್ ಅಣ್ಣ ಅವರನ್ನು ಗೆಲ್ಲಿಸುವ ಮೂಲಕ ದಿಲ್ಲಿಗೆ ಸಂದೇಶ ರವಾನಿಸಬೇಕಾಗಿದೆ ಎಂದು ಹೇಳಿದರು.

"ಸತೀಶ್ ಜಾರಕಿಹೊಳಿ ಅವರ ಗೆಲುವಿಗೆ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಹಗಲು-ರಾತ್ರಿ ಎನ್ನದೇ ಶ್ರಮಿಸುತ್ತೇವೆ' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಾರ್ಯಕರ್ತರಿಂದ ಶಪಥ ಮಾಡಿಸಿದರು. ಬೆಳಗಾವಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ನಾವು ಇನ್ನಷ್ಟು ಭದ್ರಗೊಳಿಸೋಣ ಎಂದು ಕಾರ್ಯಕರ್ತರಿಗೆ ಲಕ್ಷ್ಮಿ ಕರೆ ನೀಡಿದರು.

ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾತನಾಡಿ, "ಗ್ರಾಮೀಣ ಕ್ಷೇತ್ರದ ಜನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದಂತೆ, ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಬೇಕು. ಇದರಿಂದ ಶಾಸಕರು ಹಾಗೂ ಸಂಸದರು ಸೇರಿ ಮತ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ' ಎಂದು ಹೇಳಿದರು.

"ಗ್ರಾಮೀಣ ಮತಕ್ಷೇತ್ರದ ಜನರೊಂದಿಗೆ ಮೊದಲಿನಿಂದಲೂ ನನಗೆ ನಿಕಟ ಸಂಪರ್ಕವಿದೆ. ಇಲ್ಲಿನ ಮತದಾರರು ಯಾವಾಗಲು ಕಾಂಗ್ರೆಸ್ ಪರವಾಗಿಯೇ ಇದ್ದಾರೆ. ಈ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ'' ಎಂದು ಗ್ರಾಮೀಣ ಮತದಾರರ ಬಗ್ಗೆ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+