ಲಕ್ಷ್ಮೀ ಹೆಬ್ಬಾಳ್ಕರ್ ಸಚಿವೆಯಾಗಲು ಜಾರಕಿಹೊಳಿ ಅಡ್ಡಗಾಲು?
Recommended Video

ಬೆಳಗಾವಿ, ಮೇ 21: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಗೂ ಮುನ್ನವೇ ಮಂತ್ರಿಗಿರಿಗಾಗಿ ಲಾಬಿ ಜೋರಾಗಿದೆ. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಗೆದ್ದಿರುವ ಮೂವರು ಮಹಿಳೆಯರ ಪೈಕಿ ಒಬ್ಬರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವೆಯಾಗಲು ಉತ್ಸುಕರಾಗಿದ್ದಾರೆ. ಆದರೆ, ಲಕ್ಷ್ಮೀ ಅವರು ಸಂಪುಟ ಸೇರದಿರುವಂತೆ ಮಾಡಲು ಸತೀಶ್ ಜಾರಕಿಹೊಳಿ ತಂಡ ಸಜ್ಜಾಗಿದೆ ಎಂಬ ಸುದ್ದಿ ಬಂದಿದೆ.
ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಒಂದು ಕಡೆ ಲಾಬಿ ಜೋರಾಗಿದ್ದಾರೆ. ಇನ್ನೊಂದೆಡೆ ಸಚಿವ ಸ್ಥಾನ ತಪ್ಪಿಸಲು ಮತ್ತೊಂದು ತಂಡ ಕಾರ್ಯಾಚರಣೆ ಆರಂಭಿಸಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಲಿಂಗಾಯತ ಹಾಗೂ ಮಹಿಳಾ ಕೋಟಾದಡಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಅವರ ಬದಲಿಗೆ ಖಾನಾಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಅಥವಾ ಕೆಎಚ್ ಮುನಿಯಪ್ಪ ಅವರ ಪುತ್ರಿ ರೂಪಕಲಾ ಶಶಿಧರ್ ಗೆ ಸಚಿವ ಸ್ಥಾನ ನೀಡಲು ಎಂದು ಕೂಗೆದ್ದಿದೆ.
ಇದಲ್ಲದೆ, ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಸತೀಶ್ ಜಾರಕಿಹೊಳಿ ಅವರಿಗೆ ವಹಿಸಲಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರ ಗೆಲುವಿಗೆ ಜಾರಕಿಹೊಳಿ ಸೋದರರು ಶ್ರಮಿಸಿದ್ದಾರೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದಲ್ಲದೆ, ಜಿಲ್ಲೆಯ ಬೈಲಹೊಂಗಲದ ಮಹಾಂತೇಶ್ ಕೌಜಲಗಿ, ಚಿಕ್ಕೋಡಿಯ ಗಣೇಶ್ ಹುಕ್ಕೇರಿ, ಅಥಣಿಯ ಮಹೇಶ್ ಕುಮಠಳ್ಳಿ ಕೂಡಾ ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದಾರೆ. ಜಾರಕಿಹೊಳಿ ಕುಟುಂಬದಿಂದ ರಮೇಶ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದ್ದು, ಸತೀಶ್ ಅವರಿಗೆ ಕೇಂದ್ರ ಮಟ್ಟದ ಉನ್ನತ ಹುದ್ದೆಯಲ್ಲಿ ಮುಂದುವರೆಯಲು ಸೂಚಿಸುವ ಸಾಧ್ಯತೆಯಿದೆ.












Click it and Unblock the Notifications