ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ ಯಾವಾಗ? ಸ್ಪಷ್ಟನೆ ನೀಡಿದ ಯಡಿಯೂರಪ್ಪ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 11: ಇದೇ ತಿಂಗಳ 15ನೇ ತಾರೀಖಿನ ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಪಕ್ಷದ ವರೀಷ್ಠರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ವೈಮಾನಿಕ ಸಮೀಕ್ಷೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು‌ ಹಾಗಾಗಿ ಸಂಪುಟ ವಿಸ್ತರಣೆ ತಡವಾಗಿದೆ ಎಂದರು.

ಯಡಿಯೂರಪ್ಪ ಸಂಪುಟ ರಚನೆ ವಿಳಂಬಕ್ಕೆ 'ಕೆಜೆಪಿ' ಎಫೆಕ್ಟ್ ಕಾರಣ?
ವರೀಷ್ಠರ ಸೂಚನೆಯಂತೆ ಆಗಸ್ಟ್ 15 ರವರೆಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಆಗಸ್ಟ್ 16 ರಂದು ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Cabinet Expansion Will Be Done After August 15: Yeddyurappa

ಯಡಿಯೂರಪ್ಪ ಅವರು ಸಿಎಂ ಆಗಿ ಜುಲೈ 26 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು ಆದರೆ ಈ ವರೆಗೆ ಸಂಪುಟ ವಿಸ್ತರಣೆ ಆಗಿಲ್ಲ. ಈ ಮಧ್ಯೆ ರಾಜ್ಯದ ಹಲವೆಡೆ ಪ್ರವಾಹ ತಲೆದೂರಿದ್ದರಿಂದ ಸಂಪುಟ ವಿಸ್ತರಣೆಯನ್ನು ಮುಂದೂಡಲಾಯಿತು.

ಯಡಿಯೂರಪ್ಪ ಸಂಪುಟ : ಹೈಕಮಾಂಡ್‌ ಬಳಿ 3 ಪಟ್ಟಿ! ಯಡಿಯೂರಪ್ಪ ಸಂಪುಟ : ಹೈಕಮಾಂಡ್‌ ಬಳಿ 3 ಪಟ್ಟಿ!

ಇದೀಗ ಸಂಪುಟ ವಿಸ್ತರಣೆಯ ದಿನಾಂಕ ಪಕ್ಕಾ ಆಗಿದ್ದು, ಆಗಸ್ಟ್ 16 ರಂದು ದೆಹಲಿಗೆ ತೆರಳುವ ಯಡಿಯೂರಪ್ಪ, ಹೈಕಮಾಂಡ್ ಜೊತೆ ಚರ್ಚೆ ಬಳಿಕ ಆಗಸ್ಟ್ 18 ರಂದು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಸಚಿವರಾಗುವ ಶಾಸಕರ ಆಸೆಗೆ ನೀರು ಸುರಿದ ಆಶ್ಲೇಷ ಮಳೆ! ಸಚಿವರಾಗುವ ಶಾಸಕರ ಆಸೆಗೆ ನೀರು ಸುರಿದ ಆಶ್ಲೇಷ ಮಳೆ!

English summary
CM Yeddyurappa said cabinet expansion will be done after August 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X