ಸಚಿವ ಸಂಪುಟ ಪುನಾರಚನೆ: ಮಂತ್ರಿ ಸ್ಥಾನದ ಆಕಾಂಕ್ಷಿಯೇ ಶಾಸಕ ಲಕ್ಷ್ಮಣ ಸವದಿ? ಹೇಳಿದ್ದೇನು
ಬೆಳಗಾವಿ, ನವೆಂಬರ್ 29: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಯಾವಾಗ ಎಂದು ಹೇಳಲು ನಾನೇನು ಭವಿಷ್ಯ ಹೇಳುವವನಲ್ಲ. ಅದನ್ನು ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳಲಿದೆ. ಅವರ ತೀರ್ಮಾನದಂತೆ ನಡೆದುಕೊಳ್ಳುತ್ತೇವೆ ಎಂದು ಅವರು ಸಚಿವ ಸ್ಥಾನದ ಆಕಾಂಕ್ಷಿ ಎಂಬ ಪ್ರಶ್ನೆಗೆ ಅವರು ಮಾರ್ಮಿಕವಾಗಿ ಹೇಳಿದರು.
ಚಿಕ್ಕೋಡಿಯಲ್ಲಿ ಸುದ್ದಿಗಾರರ ಜೊತೆಗೆ ಶುಕ್ರವಾರ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ನನ್ನ ಬಳಿ ಉತ್ತರವಿಲ್ಲ. ನಿಮ್ಮ ಮನಸ್ಸಿನಲ್ಲಿ ಏನಿದೆ ಹೇಳಿ ನೀವು ಬೇಡಿಕೆ ಇಡು ಎಂದರೆ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಡುವ ಎಂದು ಮಾಧ್ಯಮವರದನ್ನು ಪ್ರಶ್ನಿಸಿದರು. ಈ ಮೂಲಕ ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರೋಕ್ಷವಾಗಿ ಅವರು ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರ ಹಾಗೂ ಪಕ್ಷದ ವರಿಷ್ಠರು ಸಚಿವ ಸಂಪುಟ ಪುನರಚನೆ ವೇಳೆ ಬೆಳಗಾವಿ, ಚಿಕ್ಕೋಡಿ ಭಾಗದ ಜನರ ಒತ್ತಾಸೆಯನ್ನು ಗಮನಕ್ಕೆ ತೆಗೆದುಕೊಳ್ಳಬೇಕು ಎನ್ನುವ ಮೂಲಕ ಜನರ ಆಸೆಯಂತೆ ನನಗೆ ಸಚಿವ ಸ್ಥಾನ ಕೊಟ್ಟರೆ ಜವಾಬ್ದಾರಿ ನಿಭಾಯಿಸುವೆ ಪರೋಕ್ಷವಾಗಿ ತಿಳಿಸಿದರು.
ಬೆಳಗಾವಿ ವಿಭಜನೆ ಮಾಡಿದರೆ ತಪ್ಪೇನು?
ಬೆಳಗಾವಿ ಜಿಲ್ಲೆಯ ವಿಭಜನೆಗೆ ಶಾಸಕ ಲಕ್ಷ್ಮಣ ಸವದಿ ಅವರು ಸಮ್ಮತಿಸಿದರು. ಬೆಳಗಾವಿ ಜಿಲ್ಲೆಯ ಗೋಕಾಕ, ಚಿಕ್ಕೋಡಿ, ಅಥಣಿ ಜಿಲ್ಲೆ ಮಾಡುವದರಲ್ಲಿ ಯಾವುದೇ ತಪ್ಪಿಲ್ಲ. ಈ ಭಾಗದ ಜನರ ಆಶಯವನ್ನು ಮುಖ್ಯಮಂತ್ರಿ ಗಳ ಗಮನಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು.
ಏತ ನೀರಾವರಿ ಯೋಜನೆ ನೆನೆಗುದಿಗೆ
ಕಾಗವಾಡ ಮತಕ್ಷೇತ್ರದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ನೆನೆಗುದಿಗೆ ಬಿದ್ದಿದೆ. ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಅವರು ಹೇಳಿದ್ದರು. ರಾಜು ಕಾಗೆ ಅವರೇನು ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ. ಬಾಗಲಕೋಟೆ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ.
ವಿದ್ಯುತ್ ಸರಬರಾಜು ವಿಚಾರವಾಗಿ ತಾಂತ್ರಿಕ ತೊಂದರೆ ಇತ್ತು. ಅದನ್ನು ಆದಷ್ಟು ಬೇಗ ಸರಿಪಡಿಸಿ ಮೊದಲ ಹಂತದ ಕಾಮಗಾರಿ ಅತಿಶೀಘ್ರದಲ್ಲಿ ಚಾಲನೆ ನೀಡುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.












Click it and Unblock the Notifications