ಅರಿಶಿಣ ಶಾಸ್ತ್ರಕ್ಕೆ ಹೋಗಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಕಲಬುರಗಿ, ಡಿಸೆಂಬರ್ 17: ಕಾರು ಚಾಲಕನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮೃತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಶಹಾಪುರ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು 35 ವರ್ಷದ ಜಯಪಾಲ್ ಗರಾನೆ ಎಂದು ಗುರುತಿಸಲಾಗಿದೆ. ಹಳೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯಲ್ಲಿ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಾರು ಚಾಲಕನಾಗಿ ಕೊಲೆಯಾದ ವ್ಯಕ್ತಿ ಕೆಲಸ ಮಾಡುತ್ತಿದ್ದ.

ಬುಧವಾರ ರಾತ್ರಿ ಸಂಬಂಧಿಕರೊಬ್ಬರ ಮದುವೆ ಅರಿಶಿಣ ಕಾರ್ಯಕ್ರಮಕ್ಕೆ ಜಯಪಾಲ್ ಹೋಗಿದ್ದರು. ಅದನ್ನು ಮುಗಿಸಿಕೊಂಡು ರಾತ್ರಿ 12.30ರ ಸುಮಾರಿಗೆ ಮನೆಗೆ ವಾಪಸ್ ಆಗುತ್ತಿದ್ದರು. ಆಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

Car Driver Found Murdered On Road

ರಾತ್ರಿಯೇ ಕೊಲೆ ನಡೆದರೂ ಯಾರಿಗೂ ವಿಚಾರ ತಿಳಿದಿಲ್ಲ. ಮುಂಜಾನೆ ವಾಕಿಂಗ್ ಹೋದ ಜನರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಯಿತು.

ಆಸ್ಪತ್ರೆಯ ಶವಗಾರದ ಮುಂದೆ ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಹಸ್ತಾಂತರ ಮಾಡಲಾಯಿತು. ಶಹಾಪುರ್ ಠಾಣೆ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+