ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ; ಕೇಂದ್ರ ಸಚಿವ ಮಾಹಿತಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 7: ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡ ರೈಲು ಮಾರ್ಗ ನಿರ್ಮಾಣ ಮಾಡಲು 927.40 ಕೋಟಿ ರುಪಾಯಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಸೋಮವಾರ ಕಾಡಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನರೇಂದ್ರ ‌ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬೆಳಗಾವಿ-ಧಾರವಾಡ ರೈಲು ಹಳಿಗೆ ಹಸಿರು ನಿಶಾನೆ ನೀಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ 50 ಪ್ರತಿಶತ ಜಾಗ ನೀಡಬೇಕು. ಜತೆಗೆ ಜನರು ಸಹ ಸಹಕಾರ ನೀಡುವುದು ಅಗತ್ಯವಾಗಿದೆ ಎಂದರು.

"ಶಿಕ್ಷಕರ ತವರೂರು" ಬೆಳಗಾವಿಯ ಈ ಇಂಚಲ ಗ್ರಾಮ

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಜನರ ಬಹು ವರ್ಷಗಳ ಬೇಡಿಕೆ‌ ಇದಾಗಿತ್ತು. 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ಈಗ ಅನುಮೋದನೆ ಸಿಕ್ಕಿದ್ದು ಸಂತಸ ತಂದಿದೆ ಎಂದರು.

Central Approves Belagavi-Dharwad Railway Line: Union Minister Suresh Angadi

ಬೆಳಗಾವಿ, ದೇಸೂರು, ಎಂ.ಕೆ.ಹುಬ್ಬಳ್ಳಿ, ಹುಲಿಕಟ್ಟಿ, ಜಾಲಿಕೊಪ್ಪ, ಬೇಲೂರು ಕೈಗಾರಿಕಾ ಪ್ರದೇಶದಿಂದ ಧಾರವಾಡಕ್ಕೆ ತಲುಪುತ್ತದೆ. ಒಂದು ಗಂಟೆಯಲ್ಲಿ ಬೆಳಗಾವಿಯಿಂದ ಹುಬ್ಬಳ್ಳಿ-ಧಾರವಾಡಕ್ಕೆ ತಲುಪುವ ವ್ಯವಸ್ಥೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಬೆಳಗಾವಿ, ಹುಬ್ಬಳ್ಳಿ ಜನತೆಯ ಪರವಾಗಿ ವಿಶೇಷವಾಗಿ ಧನ್ಯವಾದ ತಿಳಿಸುತ್ತೇನೆ ಎಂದು ಸುರೇಶ್ ಅಂಗಡಿ ಹೇಳಿದರು.

English summary
The Union Cabinet has approved a Rs 927.40 crore project to build the Belagavi-Dharwad railway line, Union Railway Minister Suresh Angadi said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X